ಹೈಕಮಾಂಡ್ ಸೂಚನೆ: ಕರ್ನಾಟಕ ಕಾಂಗ್ರೆಸ್ ಪಾದಯಾತ್ರೆ ಸ್ಥಗಿತ

Prasthutha|

ರಾಮನಗರ: ಕಾಂಗ್ರೆಸ್ ಪಕ್ಷ ಮೇಕೆದಾಟು ಯೋಜನೆಯ ಜಾರಿಗೆ ಆಗ್ರಹಿಸಿ ಕಳೆದ ವಾರದಿಂದ ಹಮ್ಮಿಕೊಂಡಿದ್ದ ಪಾದಯಾತ್ರೆಯನ್ನು ತಾತ್ಕಾಲಿಕವಾಗಿ ರದ್ದುಗೊಳಿಸಿದೆ.

- Advertisement -

ಈ ಕುರಿತು ಸುದ್ದಿಗೋಷ್ಠಿ ನಡೆಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಪಕ್ಷದ ಹೈಕಮಾಂಡ್ ಆದೇಶದಂತೆ ಪಾದಯಾತ್ರೆಯನ್ನು ತಾತ್ಕಾಲಿಕವಾಗಿ ರದ್ದುಗೊಳಿಸಲು ತೀರ್ಮಾನಿಸಿದ್ದೇವೆ. ಕೋವಿಡ್ ಕಡಿಮೆಯಾದ ಬಳಿಕ ಮತ್ತೆ ಮುಂದುವರೆಸುವುದಾಗಿ ಹೇಳಿದ್ದಾರೆ. ಸುದ್ದಿಗೋಷ್ಠಿ ರಾಮನಗರದ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು.

ಬಳಿಕ ಮಾತನಾಡಿದ ಸಿದ್ದರಾಮಯ್ಯ, ಇಂದಿನಿಂದ ರಾಮನಗರದಿಂದ ಪಾದಯಾತ್ರೆ ಆರಂಭ ಆಗಬೇಕಾಗಿತ್ತು. ನಮ್ಮ ಪಾದಯಾತ್ರೆ ಅಭೂತಪೂರ್ವ ಯಶಸ್ಸು ಕಂಡಿತ್ತು. ಜನರ ಆಶೀರ್ವಾದವೇ ಇದಕ್ಕೆ ಕಾರಣ. ರಾಜ್ಯದಲ್ಲಿ  ಕೋವಿಡ್ ಹೆಚ್ಚಳಕ್ಕೆ ಬಿಜೆಪಿ ಕಾರಣವೇ ಹೊರತು ನಾವಲ್ಲ ಎಂದು ಸರ್ಕಾರದ ಮೇಲೆ ಆಕ್ರೋಶ ಹೊರಹಾಕಿದ್ದಾರೆ.

- Advertisement -

ಜನರ ಹಿತ ಕಾಯುವ ದೃಷ್ಟಿಯಿಂದ ನಾವು ಪಾದಯಾತ್ರೆಯನ್ನು ತಾತ್ಕಾಲಿಕವಾಗಿ ನಿಲ್ಲಿಸುತ್ತೇವೆ.  ಕೋವಿಡ್ ಪ್ರಕರಣಗಳು ಕಡಿಮೆಯಾದ ಬಳಿಕ ಮತ್ತೆ ಪಾದಯಾತ್ರೆಯನ್ನು ಮುಂದುವರಿಸುತ್ತೇವೆ ಎಂದು ಅವರು ಹೇಳಿದರು. 

ನ್ಯಾಯಲಯದ ಆದೇಶಕ್ಕೆ ಗೌರವ ಕೊಟ್ಟು ನಾವು ಪಾದಯಾತ್ರೆಯನ್ನು ಸ್ಥಗಿತಗೊಳಿಸುತ್ತಿದ್ದೇವೆ. ಇದು ತಾತ್ಕಾಲಿಕ ಬ್ರೇಕ್ ಅಷ್ಟೇ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.

Join Whatsapp