ಸುಳ್ಯ: ಇತ್ತೀಚೆಗೆ ಬೆಳ್ಳಾರೆಯಲ್ಲಿ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆಯಾಗಿದ್ದು, ಈತನ ಮನೆಗೆ ವಿಧಾನ ಪರಿಷತ್ತಿನ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್, ಕಾಂಗ್ರೆಸ್ ಹಿರಿಯ ಮುಖಂಡ ರಮಾನಾಥ್ ರೈ, ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಮತ್ತು ದ.ಕ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಅವರನ್ನೊಳಗೊಂಡ ನಿಯೋಗ ಭೇಟಿ ನೀಡಿ ಮೃತನ ಕುಟುಂಬಕ್ಕೆ ಸಾಂತ್ವನ ಹೇಳಿದೆ.
ಮೃತ ಪ್ರವೀಣ್ ಅವರ ಚಿಕ್ಕಪ್ಪ ಜಯರಾಮ್ ಪೂಜಾರಿ ಅವರು, ಕಾಂಗ್ರೆಸ್ ನಾಯಕರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು. ‘ನಿಮಗೆ ಬರಲು ಇಂದು ಟೈಮ್ ಸಿಕ್ಕಿದ್ದಾ?, ಇಷ್ಟು ದಿನ ಬರದ ನೀವು ಇಂದು ಚೆಂದ ನೋಡಲು ಬಂದಿರುವುದಾ?. ಜಿಲ್ಲೆಯ ಕಾಂಗ್ರೆಸ್ ಮುಖಂಡರಾದ ನೀವು ಹಿಂದುತ್ವದ ವಿರುದ್ಧ ಮಾತನಾಡುತ್ತೀರಿ. ಹಿಂದುತ್ವಕ್ಕೆ ಕಾಂಗ್ರೆಸ್ ಏನು ಮಾಡುತ್ತಿದೆ ಎಂದು ಕಿಡಿಕಾರಿದರು.
ನನ್ನ ಜೀವನ ಹಾಳಾಯಿತು ಎಂದು ಮೃತ ಪ್ರವೀಣ್ ಅವರ ತಾಯಿ ರತ್ನಾವತಿ ಅವರು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.
ಇದಕ್ಕೆ ಪ್ರತಿಕ್ರಿಯಿಸಿದ ಬಿಕೆ ಹರಿಪ್ರಸಾದ್, ಮುಂದಕ್ಕೆ ಇಂಹತ ಹತ್ಯೆ ಮರುಕಳಿಸಬಾರದು ಎಂಬ ಕಾರಣದಿಂದ ನಾವು ಭೇಟಿ ನೀಡಿದ್ದೇವೆ ಎಂದು ತಿಳಿಸಿದರು.