Home ಟಾಪ್ ಸುದ್ದಿಗಳು ಕೋವಿಡ್ ಸೋಂಕು ಏರಿಕೆ ಹಿನ್ನೆಲೆ : ಹೊಸ ಮಾರ್ಗಸೂಚಿ ಹೊರಡಿಸಿದ ರಾಜ್ಯ ಸರಕಾರ

ಕೋವಿಡ್ ಸೋಂಕು ಏರಿಕೆ ಹಿನ್ನೆಲೆ : ಹೊಸ ಮಾರ್ಗಸೂಚಿ ಹೊರಡಿಸಿದ ರಾಜ್ಯ ಸರಕಾರ

ಬೆಂಗಳೂರು; ಕಳೆದ ಹಲವಾರು ದಿನಗಳಿಂದ ರಾಜ್ಯದಲ್ಲಿ ಕೋವಿಡ್ ಸೋಂಕು ಪ್ರಕರಣಗಳು ಉಲ್ಬಣಗೊಳ್ಳುತ್ತಿದ್ದು, ಈ ಕುರಿತು ಜಾಗೃತಿ ವಹಿಸುವ ಸಲುವಾಗಿ  ಕರ್ನಾಟಕ ರಾಜ್ಯ ಸರಕಾರ ಹೊಸ ಮಾರ್ಗಸೂಚಿ ಹೊರಡಿಸಿದೆ.

ಸಾರ್ವಜನಿಕರು  ಮಾಸ್ಕ್ ಮತ್ತು ಸಾಮಾಜಿಕ ಅಂತರವನ್ನು ಕಡ್ಡಾಯವಾಗಿ ಪಾಲಿಸಬೇಕು, ಸಾರ್ವಜನಿಕ ಸ್ಥಳಗಳಲ್ಲಿ ಕೋವಿಡ್ ನಿಯಮಗಳನ್ನು ಕಟ್ಟುನಿಟ್ಠಾಗಿ ಪಾಲಿಸಬೇಕು ಮತ್ತು ಶಿಕ್ಷಣ ಸಂಸ್ಥೆಗಳು , ಕಛೇರಿಗಳು, ಮಾಲ್ , ಹೊಟೇಲ್ , ರೆಸ್ಟೋರೆಂಟ್ , ಪಬ್ ಗಳಲ್ಲಿ ,ಕಾರ್ಖನೆ ಮತ್ತು ಹಾಸ್ಟೆಲ್ ಗಳಲ್ಲಿ ಮಾಸ್ಕ್ ಧಾರಣೆಯನ್ನು ಕಡ್ಡಾಯಗೊಳಿಸಿದ್ದು, ಮಾಸ್ಕ್ ಧರಿಸಿದವರಿಗೆ ಮಾತ್ರ ಪ್ರವೇಶಕ್ಕೆ ಅವಕಾಶ ನೀಡಬೇಕೆಂದು ಮಾರ್ಗಸೂಚಿಯಲ್ಲಿ ತಿಳಿಸಿದೆ.

ಸ್ವಂತ ವಾಹನ ಮತ್ತು ಬಸ್ , ರೈಲು ಮುಂತಾದ ಸಾರ್ವಜನಿಕ ವಾಹನಗಳಲ್ಲಿ ಕಡ್ಡಾಯವಾಗಿ ಪ್ರಯಾಣಿಕರು ಮಾಸ್ಕ್ ಧರಿಸುವ ಮೂಲಕ ಕೋವಿಡ್ ನಿಯಮಗಳನ್ನು ಪಾಲಿಸಬೇಕೆಂದು ತಿಳಿಸಿದೆ. ಆರೋಗ್ಯ ಸಮಸ್ಯೆಯಿದ್ದವರು ಆದ್ಯತೆಯ ಮೇರೆಗೆ ಕೋವಿಡ್ ಪರೀಕ್ಷೆಯನ್ನು ಮಾಡಬೇಕು. ಅರ್ಹ ಜನರು ಬೂಸ್ಟರ್ ಲಸಿಕೆಯನ್ನು ಪಡೆಯಬೇಕೆಂದೂ ತಿಳಿಸಿದೆ.

Join Whatsapp
Exit mobile version