ನಾಳೆ ರಾಜ್ಯಾದ್ಯಂತ ಮತದಾನ: ಎಲ್ಲೆಡೆ ಬಿಗಿ ಪೊಲೀಸ್ ಬಂದೋಬಸ್ತ್

Prasthutha|

- Advertisement -

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯ ಮತದಾನ ನಾಳೆ ನಡೆಯಲಿದ್ದು, ಮತದಾನ ದಿನದಂದು ರಾಜ್ಯದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

ಬಂದೋಬಸ್ತ್ ಗಾಗಿ ಬರೋಬ್ಬರಿ 1.56 ಲಕ್ಷ ಪೊಲೀಸರ ನಿಯೋಜನೆ ಮಾಡಲಾಗಿದೆ.

- Advertisement -

ರಾಜ್ಯದಲ್ಲಿ ಒಟ್ಟು 58, 282 ಮತಗಟ್ಟೆಗಳ ನಿರ್ಮಾಣ ಮಾಡಲಾಗಿದ್ದು, ಇದರಲ್ಲಿ 11,617 ಸೂಕ್ಷ್ಮ ಮತಗಟ್ಟೆಗಳ ನಿರ್ಮಾಣ ಮಾಡಲಾಗಿದೆ. ಸೂಕ್ಷ್ಮ ಮತಗಟ್ಟೆಗಳಲ್ಲಿ ಸಿಎಪಿಎಫ್ ಹಾಗೂ ಪೊಲೀಸರಿಂದ ಭದ್ರತೆ ನಿಯೋಜನೆ ಮಾಡಲಾಗಿದೆ. 2,930 ಪೊಲೀಸ್ ಮೊಬೈಲ್ ಸೆಕ್ಟರ್ ಗಳ ಕಾರ್ಯಾಚರಣೆ ಮಾಡಲಾಗಿದೆ.

ಚುನಾವಣೆ ಹಿನ್ನಲೆಯಲ್ಲಿ ಚುನಾವಣಾ ಆಯೋಗ ಮದ್ಯ ಪ್ರಿಯರಿಗೆ ಶಾಕ್ ಕೊಟ್ಟಿದ್ದು, ಇಂದು ಸಂಜೆ 5 ಗಂಟೆಯಿಂದ ಪಬ್, ಬಾರ್, ಎಂಆರ್​​ಪಿ ಔಟ್‌ ಲೆಟ್ ಬಂದ್ ಮಾಡಿದೆ.