ಬೆಂಗಳೂರು: 50 ನೇ ವರ್ಷದ ಸುವರ್ಣ ಮಹೋತ್ಸವವನ್ನು ಆಚರಿಸುತ್ತಿರುವ ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮ ಪರಿಸರ ಜಾಗೃತಿ ಮತ್ತು ಮಾಲಿನ್ಯ ನಿಯಂತ್ರಣ ಕುರಿತು ಜನರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಜೂನ್ 15ರಂದು ಕಾಲ್ನಡಿಗೆ ಜಾಥ ಹಾಗೂ ಗುರುವಾರ ಜೂನ್ 16 ನೇ 2022 ರಂದು ಸೈಕಲ್ ಜಾಥಾ ಹಮ್ಮಿಕೊಂಡಿದೆ.
ಜೂನ್ 15 ರಂದು ಬೆಳಿಗ್ಗೆ 7 ಗಂಟೆಗೆ ವಿಧಾನಸೌಧದ ಎದುರಿನಿಂದ ಪ್ರಾರಂಭವಾಗಲಿರುವ ಕಾಲ್ನಡಿಗೆ ಜಾಥಾಕ್ಕೆ ಕರ್ನಾಟಕ ಅರಣ್ಯ ಅಭಿವೃದ್ದಿ ನಿಗಮದ ಅಧ್ಯಕ್ಷೆ ತಾರಾ ಅನುರಾಧ ಚಾಲನೆ ನೀಡಲಿದ್ದಾರೆ. ಈ ಕಾರ್ಯಕ್ರಮದ ನಂತರ ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿರುವ ಕ್ರೀಡಾ ಕೂಟ ಕ್ಕೆ ಮೈಸೂರಿನ ರಾಜವಂಶಸ್ಥರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಚಾಲನೆ ನೀಡಲಿದ್ದಾರೆ.
ಜೂನ್ 16 ರಂದು ಬೆಳಿಗ್ಗೆ 8 ಗಂಟೆಗೆ ವಿಧಾನಸೌಧದ ಎದುರಿನಿಂದ ಕಂಠೀರವ ಕ್ರೀಡಾಂಗಣದ ವರೆಗೆ ಸೈಕಲ್ ಜಾಥಾ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.