ಚೆಕ್ ಬುಕ್ ವಂಚನೆ ಪ್ರಕರಣ: ಕರಕುಶಲ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷನ ಪಾಸ್’ಪೋರ್ಟ್ ಜಪ್ತಿ

Prasthutha|

ಬೆಂಗಳೂರು: ಚೆಕ್ ಬುಕ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐಪಿಎಸ್ ಅಧಿಕಾರಿ ರೂಪಾ ಮೌದ್ಗಿಲ್ ಅವರು ನೀಡಿದ ದೂರಿನ ಆಧಾರದಲ್ಲಿ ರಾಜ್ಯ ಕರಕುಶಲ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಬೇಳೂರು ರಾಘವೇಂದ್ರ ಶೆಟ್ಟಿ ಅವರ ಪಾಸ್’ಪೋರ್ಟ್ ಅನ್ನು ಪಾಸ್’ಪೋರ್ಟ್ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

- Advertisement -

ಈ ಹಿಂದೆ ಕರಕುಶಲ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿದ್ದ ರಾಘವೇಂದ್ರ ಶೆಟ್ಟಿ ಅವರ ವಿರುದ್ಧ ಅವ್ಯವಹಾರಕ್ಕೆ ಸಂಬಂಧಿಸಿದಂತೆ ರೂಪಾ ಮೌದ್ಗಿಲ್ ಅವರು ದೂರು ನೀಡಿದ್ದರು.

ನಿಗಮದ ವ್ಯವಸ್ಥಾಪಕ ನಿರ್ದೇಶಕಿಯಾಗಿ ಸೇವೆ ಸಲ್ಲಿಸಿದ್ದ ರೂಪ ಅವರು ರಾಘವೇಂದ್ರ ವಿರುದ್ಧ ಚೆಕ್ ಬೌನ್ಸ್, ಹಣ ಪಾವತಿ ವಂಚನೆ ಮಾಡಿದ ಆರೋಪದಡಿಯಲ್ಲಿ ದೂರು ನೀಡಿದ್ದು, ಇದರ ಆಧಾರದಲ್ಲಿ ಅವರ ವಿರುದ್ಧ ಬೆಂಗಳೂರಿನ ಅಶೋಕ್ ನಗರ ಠಾಣೆಯಲ್ಲಿ ಐಪಿಸಿ ಸೆಕ್ಷನ್ 175, 177, 120ಬಿ, 406, 407, 420, 23ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

Join Whatsapp