ಕರ್ನಾಟಕಕ್ಕೆ ತೆಲಂಗಾಣದಿಂದ ಭತ್ತ, ಛತ್ತೀಸಗಢದಿಂದ ಅಕ್ಕಿ: ಸಿಎಂ ಸಿದ್ದರಾಮಯ್ಯ

Prasthutha|

ಬೆಂಗಳೂರು: ತೆಲಂಗಾಣ ಸರ್ಕಾರ ರಾಜ್ಯಕ್ಕೆ ಭತ್ತ ಹಾಗೂ ಛತ್ತೀಸಗಢ ಸರ್ಕಾರ ಕರ್ನಾಟಕಕ್ಕೆ 1.5 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಕೊಡುವುದಾಗಿ ಹೇಳಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

- Advertisement -


ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪಂಜಾಬ್ ಸರ್ಕಾರವೂ ನವೆಂಬರ್ ತಿಂಗಳಿನಿಂದ ಕೊಡುವುದಾಗಿ ತಿಳಿಸಿದೆ. NCCF ಕೇಂದ್ರಿಯ ಭಂಡಾರ, ನಫೆಡ್ನಿಂದ ಕೊಟೆಷನ್ ಕೇಳಿದ್ದೇವೆ. ಅವರು ಕೊಟ್ಟ ಬಳಿಕ ದರ, ಗುಣಮಟ್ಟ, ಪ್ರಮಾಣ ನೋಡಿ ಮುಂದಿನ ತೀರ್ಮಾನ ಮಾಡಲಾಗುವುದು ಎಂದರು. ರಾಜ್ಯದ ಜನರಿಗೆ 10 ಕೆಜಿ ಅಕ್ಕಿ ನೀಡಲು ಬೇರೆ ರಾಜ್ಯಗಳ ಸಂಪರ್ಕ ಮಾಡಲಾಗುತ್ತಿದೆ.


ರಾಜ್ಯಕ್ಕೆ 2 ಲಕ್ಷದ 29 ಸಾವಿರ ಮೆಟ್ರಿಕ್ ಟನ್ ಅಕ್ಕಿ ಬೇಕು. ಪಂಜಾಬ್ ನವರ ಬಳಿ ಸ್ಟಾಕ್ ಇಲ್ಲ, ಆಂಧ್ರಪ್ರದೇಶದವರ ಬಳಿಯೂ ಅಕ್ಕಿ ಸಿಗುತ್ತಿಲ್ಲ. ಹೀಗಾಗಿ ಸರ್ಕಾರಿ ಸಂಸ್ಥೆಗಳ ಕೊಟೇಷನ್ ಕರೆದಿದ್ದೇವೆ. ಇವತ್ತು ಮೂರು ಗಂಟೆಗೆ ಮೆಗೋಸಿಯೇಷನ್ ಇದೆ. ದರ ಎಷ್ಟು ಏನು ಅನ್ನೋದರ ಬಗ್ಗೆ ಚರ್ಚಿಸಲು ಇಂದು 3 ಗಂಟೆಗೆ ಸಭೆ ಕರೆದಿದ್ದೇವೆ. ರಾಗಿ, ಜೋಗಿ ನಮ್ಮ ಬಳಿ ಇದೆ. ಆದರೆ ಇವು ಎರಡು ತಿಂಗಳಿಗೆ ಮಾತ್ರ ಸಾಕಾಗುತ್ತದೆ ಎಂದರು.