ಸಾಲ ಪಡೆದು ಜರ್ಮನಿ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ಕರ್ನಾಟಕದ ಯುವತಿಗೆ ಚಿನ್ನ, ಬೆಳ್ಳಿ, ಕಂಚಿನ ಪದಕ

Prasthutha|

ಬೆಳಗಾವಿ: ಬಡ್ಡಿಗೆ ಸಾಲ ಪಡೆದು ಜರ್ಮನಿಯಲ್ಲಿ ನಡೆದ 8ನೇ ವಿಶ್ವ ಕುಬ್ಜರ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ಕರ್ನಾಟಕದ ಯುವತಿ ಮೂರು ಪದಕ ಗೆದ್ದು ವಿಶೇಷ ಸಾಧನೆ ಮಾಡಿದ್ದಾರೆ.

- Advertisement -

ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಚಿಕ್ಕನಂದಿ ಗ್ರಾಮದ ಯುವತಿ ಮಂಜುಳಾ ಶಿವಾನಂದ ಗೊರಗುದ್ದಿ, ಮೂರ್ತಿ ಚಿಕ್ಕದಾದರೂ ಕೀರ್ತಿ ದೊಡ್ಡದು ಎನ್ನುವಂತೆ ಸಾಧನೆ ಮಾಡಿ ತೋರಿಸಿದ್ದಾರೆ. ಗುಂಡು ಎಸೆತದಲ್ಲಿ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ, ಚಕ್ರ ಎಸೆತದಲ್ಲಿ 2ನೇ ಸ್ಥಾನ ಪಡೆದು ಬೆಳ್ಳಿ ಪದಕ ಹಾಗೂ ಜಾವೆಲಿನ್ ಥ್ರೋದಲ್ಲಿ 3ನೇ ಸ್ಥಾನ ಪಡೆದು ಕಂಚಿನ ಪದಕ ಬಾಚಿಕೊಂಡಿದ್ದಾರೆ.

ಜುಲೈ 28ರಿಂದ ಆಗಸ್ಟ್ 4ರ ವರೆಗೆ ಆಯೋಜನೆಗೊಂಡಿದ್ದ ವಿಶ್ವ ಕುಬ್ಜರ ಕ್ರೀಡಾಕೂಟದಲ್ಲಿ ತನ್ನ ಸಾಮರ್ಥ್ಯ ಸಾಬೀತು ಮಾಡಿರುವ ಮಂಜುಳಾ ಅವರು ಮೂರು ದಿನಗಳಲ್ಲಿ ಪದಕಗಳೊಂದಿಗೆ ತವರಿಗೆ ಮರಳಲಿದ್ದಾರೆ. ಸುಮಾರು 2.5 ಲಕ್ಷ ರೂ. ಹಣ ಹೊಂದಿಸಿ ದೂರದ ಜರ್ಮನಿಗೆ ಹೋಗಿದ್ದ ಮಂಜುಳಾ ಪದಕ ಗೆಲ್ಲುವ ತನ್ನ ಕನಸು-ನನಸು ಮಾಡಿಕೊಂಡಿದ್ದಾರೆ.



Join Whatsapp