ಕರ್ನಾಟಕ ಸರ್ಕಾರಕ್ಕೆ ತಾಕತ್ತಿದ್ದರೆ MES ಬ್ಯಾನ್​ ಮಾಡಲಿ: ಸಂಜಯ್​ ರಾವತ್​

Prasthutha|

ಮುಂಬೈ: ಧೈರ್ಯವಿದ್ದರೆ ಎಂಇಎಸ್ ನ್ನು ನಿಷೇಧಿಸಲಿ ಎಂದು ಶಿವಸೇನೆ ನಾಯಕ ಸಂಜಯ್ ರಾವತ್ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಸವಾಲು ಹಾಕಿದ್ದಾರೆ.

- Advertisement -

ಬೆಳಗಾವಿ ಭಾಗದಲ್ಲಿ ಎಂಇಎಸ್ ಪುಂಡರ ಕೃತ್ಯ ಮಿತಿ ಮೀರುತ್ತಿರುವ ಮಧ್ಯೆ ರಾಜ್ಯದಲ್ಲಿ ಎಂಇಎಸ್ ಬ್ಯಾನ್ ಮಾಡಬೇಕೆಂಬ ಕೂಗು ಜೋರಾಗಿ ಕೇಳಿಸತೊಡಗಿದೆ.

ಶಿವಾಜಿ ಹೆಸರಿನಲ್ಲಿ ಮತ ಕೇಳುವ ಬಿಜೆಪಿ, ಬೆಂಗಳೂರಿನಲ್ಲಿ ಶಿವಾಜಿ ಮೂರ್ತಿಗೆ ಮಸಿ ಬಳಿದರೂ ಮೌನ ವಹಿಸಿದೆ. ಆದರೆ, ಇನ್ನೊಂದೆಡೆ ಮೊಘಲರ ವಿರುದ್ಧ ಶಿವಾಜಿ ಮಹಾರಾಜರ ಹೋರಾಟವನ್ನು ಬಣ್ಣಿಸುತ್ತಿದೆ. ಈಗ ಇಷ್ಟೊಂದು ಅವಮಾನವಾದರೂ ಮೌನ ವಹಿಸಿದೆ. ಕೇಂದ್ರದ ಯಾವೊಬ್ಬ ಬಿಜೆಪಿ ಸಂಸದರೂ ಈ ಕುರಿತು ಮಾತನಾಡುತ್ತಿಲ್ಲ ಎಂದು ಆರೋಪಿಸಿದ್ದಾರೆ.

- Advertisement -

ನಮ್ಮ ಯೂಟ್ಯೂಬ್ ಚಾನೆಲನ್ನು Subscribe ಮಾಡಿ : Prasthutha News

Join Whatsapp