ಮೈಸೂರು: ವಿವಿಧ ಜಿಲ್ಲೆಗಳಲ್ಲಿ ವಾಸವಿರುವ ಪರಿಶಿಷ್ಟ ಜಾತಿ (ಎಸ್.ಸಿ) ಗೆ ಸೇರಿದ ಅಕ್ರಮ ಬಾಂಗ್ಲಾದೇಶಿಯರ ಪತ್ತೆಗೆ ಕರ್ನಾಟಕ ಸರ್ಕಾರ ವಿಶೇಷ ಸಮೀಕ್ಷೆಯನ್ನು ಆರಂಭಿಸಿದೆ.
ಈ ಸಂಬಂಧ ಡಾ ಬಿ.ಆರ್ ಅಂಬೇಡ್ಕರ್ ಸಂಶೋಧನಾ ಮಂಡಳಿ, ಬೆಂಗಳೂರಿನ ಸಮಾಜ ಕಲ್ಯಾಣ ಇಲಾಖೆಯ ಜಂಟಿ/ ಉಪ ನಿರ್ದೇಶಕರಿಗೆ ಸುತ್ತೋಲೆ ಹೊರಡಿಸಿ ಬಾಂಗ್ಲಾದೇಶದ ಪರಿಶಿಷ್ಟ ಜಾತಿಗೆ ಸೇರಿದ ಜನಸಂಖ್ಯೆಯ ಮಾಹಿತಿ ಒದಗಿಸುವಂತೆ ಸೂಚಿಸಿದೆ.
ಮಾತ್ರವಲ್ಲ ಬಾಂಗ್ಲಾದೇಶ ಅಕ್ರಮ ವಲಸಿಗರ ಪಟ್ಟಿ ನೀಡುವಂತೆ ಚಿಕ್ಕಮಗಳೂರಿನಲ್ಲಿರುವ ಸಮಾಜ ಕಲ್ಯಾಣ ಇಲಾಖೆಗೆ ಸುತ್ತೋಲೆಯ ಪ್ರತಿಯನ್ನು ನೀಡಿದೆ. ಪರಿಶಿಷ್ಟ ಜಾತಿಗೆ ಸೇರಿದ ವಿಭಾಗಗಳಾದ ನಮಸೂದ್ರ, ಪೌದ್/ ಪೌಂದ್ರ ಮತ್ತು ರಾಜಬಂಮ್ಶಿ ಗಳ ಕುರಿತು ಮಾಹಿತಿ ಮತ್ತು ದಾಖಲೆಗಳನ್ನು ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿವೆ.
ಸರ್ಕಾರ ನಡೆಸುತ್ತಿರುವ ಈ ಸಮೀಕ್ಷೆ ಮಲ್ನಾಡ್ ತಾಲೂಕಿನಲ್ಲಿ ಪೂರ್ಣಗೊಂಡಿದ್ದು, ಪರಿಶಿಷ್ಟ ಜಾತಿಗೆ ಸೇರಿದ ಅಕ್ರಮ ಬಾಂಗ್ಲಾ ವಲಸಿಗರು ಪತ್ತೆಯಾಗಿಲ್ಲ ಎಂದು ಬಿ.ಆರ್ ಅಂಬೇಡ್ಕರ್ ಸಂಶೋಧನ ಮಂಡಳಿ ನಿರ್ದೇಶಕರಾದ ಪ್ರತಿಭಾ ಅವರು ತಿಳಿಸಿದ್ದಾರೆ.