ಆರ್ಥಿಕ ಸಂಕಷ್ಟದ ನಡುವೆಯೂ ಸಚಿವರಿಗೆ ದುಬಾರಿ ಕಾರುಗಳ ಖರೀದಿಗೆ ಮುಂದಾದ ಯಡಿಯೂರಪ್ಪ ಸರಕಾರ!

Prasthutha: February 24, 2021

ಬೆಂಗಳೂರು : ಕೊರೊನಾದಿಂದ ರಾಜ್ಯದ ಆರ್ಥಿಕ ಸ್ಥಿತಿ ಹದಗೆಟ್ಟಿರುವುದರಿಂದ ಅನೇಕ ಮೂಲಭೂತ ಅಭಿವೃದ್ಧಿ ಕಾರ್ಯಗಳಿಗೂ ಕೂಡ ಅನುದಾನವನ್ನು ಕಡಿತಗೊಳಿಸಲಾಗಿದೆ. ಆದರೆ ನಮ್ಮ ಜನಪ್ರತಿನಿಧಿಗಳ ದುಂದುವೆಚ್ಚಕ್ಕೆ ಮಾತ್ರ ಕಡಿವಾಣ ಬೀಳಲಿಲ್ಲ. ಕೊರೊನಾ ವೈರಸ್ ಆರ್ಥಿಕ ಸಂಕಷ್ಟದ ಮಧ್ಯೆ ರಾಜ್ಯದ ಸಚಿವರು ಹಾಗೂ ಸಂಸದರು ಐಷಾರಾಮಿ ಹೊಸ ಕಾರು ಕೊಳ್ಳಲು ಖರೀದಿಯ ಮೊತ್ತವನ್ನು ಹೆಚ್ಚಳ ಮಾಡಿ ಸರ್ಕಾರ ಆದೇಶ ಮಾಡಿದೆ

ಸಚಿವರು ಹಾಗೂ ರಾಜ್ಯದ ಎಲ್ಲ ಸಂಸದರು ಹೊಸ ಕಾರು ಖರೀದಿ ಮಾಡಲು 23 ಲಕ್ಷ ರೂಪಾಯಿ ನೀಡಲು ಸರ್ಕಾರ ಸಮ್ಮತಿಸಿದೆ. ಹೀಗಾಗಿ ರಾಜ್ಯದ ಎಲ್ಲಾ ಸಚಿವರು, ಸಂಸದರು ಕಾರು ಖರೀದಿ ಮಾಡಲು ಸರ್ಕಾರದಿಂದ 23 ಲಕ್ಷ ರೂ. ಗಳನ್ನು ಪಡೆಯಲು ಅವಕಾಶವಿದೆ. ಈ ಹಿಂದೆ ಕಾರು ಖರೀದಿಗೆ ನೀಡುತ್ತಿದ್ದ ಮೊತ್ತವನ್ನು ಹೆಚ್ಚಳ ಮಾಡಲು ಸಚಿವರು, ಸಂಸದರಿಂದ ಒತ್ತಡ ಬಂದಿತ್ತು. ಹೀಗಾಗಿ ಸಚಿವರು ಮತ್ತು ಸಂಸದರ ಒತ್ತಡಕ್ಕೆ ಮಣಿದ ಸರ್ಕಾರದಿಂದ ಹೊಸ ಕಾರು ಖರೀದಿಗೆ 23 ಲಕ್ಷ ರೂ. ಅನುದಾನ ಬಿಡುಗಡೆಗೆ ಒಪ್ಪಿಕೊಂಡಿದೆ.

ರಾಜ್ಯದ 33 ಸಚಿವರು (ಸಿಎಂ ಹೊರತು ಪಡಿಸಿ) ಹಾಗೂ 28 ಸಂಸದರು ಹೊಸ ಐಷಾರಾಮಿ ಕಾರುಗಳನ್ನು ಕೊಳ್ಳಬಹುದಾಗಿದೆ. ಅದಕ್ಕೆ ಸರ್ಕಾರ ತಲಾ 23 ಲಕ್ಷ ರೂಪಾಯಿಗಳನ್ನು ಒದಗಿಸಲಿದೆ. ಎಲ್ಲ ಸಚಿವರು ಹಾಗೂ ಸಂಸದರು ಐಶಾರಾಮಿ ಕಾರುಗಳನ್ನು ಖರೀದಿಗೆ ಸುಮಾರು 14 ಕೋಟಿ ರೂಪಾಯಿಗಳಿಗೂ ಅಧಿಕ ಹಣವನ್ನು ವ್ಯಯಿಸಬೇಕಾಗುತ್ತದೆ.

ಮೊದಲೇ ಕೊರೊನಾ ವೈರಸ್ ಸಂಕಷ್ಟದಿಂದ ಮಕ್ಕಳ ಶಾಲಾ ಶುಲ್ಕವನ್ನು ಕಟ್ಟಲು ಜನರು ಪರದಾಡುತ್ತಿದ್ದಾರೆ. ಆದರೆ ನಮ್ಮ ಜನಪ್ರತಿನಿಧಿಗಳು ಮಾತ್ರ ತಮ್ಮ ಐಷಾರಾಮಿ ಬದುಕಿನಿಂದ ಹೊರಗೆ ಬರಲಿಲ್ಲ.  ಒಂದು ವರ್ಷಕ್ಕೆ ಕಾರು ಖರೀದಿ ಮುಂದೂಡಿದ್ದರೆ ಏನೂ ಆಗುತ್ತಿರಲಿಲ್ಲ ಎಂಬುದು ಜನರ ಅಭಿಪ್ರಾಯವಾಗಿದೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!