Home ಜಾಲತಾಣದಿಂದ ‘ಶಕ್ತಿ’ ಯೋಜನೆಯಡಿ ಮಹಿಳೆಯರಿಗೆ ಉಚಿತ ಪ್ರಯಾಣ : ಮಾರ್ಗಸೂಚಿ ಬಿಡುಗಡೆ, ಷರತ್ತು-ನಿಬಂಧನೆಗಳು ಇಲ್ಲಿವೆ

‘ಶಕ್ತಿ’ ಯೋಜನೆಯಡಿ ಮಹಿಳೆಯರಿಗೆ ಉಚಿತ ಪ್ರಯಾಣ : ಮಾರ್ಗಸೂಚಿ ಬಿಡುಗಡೆ, ಷರತ್ತು-ನಿಬಂಧನೆಗಳು ಇಲ್ಲಿವೆ

‘ಶಕ್ತಿ’ ಯೋಜನೆಯಡಿ ಮಹಿಳೆಯರಿಗೆ ಉಚಿತ ಪ್ರಯಾಣ

ಬೆಂಗಳೂರು: ನೂತನ ಕಾಂಗ್ರೆಸ್ ಸರ್ಕಾರ ಉಚಿತ ಗ್ಯಾರಂಟಿ ಯೋಜನೆಯಡಿ ಆರಂಭಿಸುತ್ತಿರುವ ‘ಶಕ್ತಿ’ ಯೋಜನೆ ಮಾರ್ಗಸೂಚಿಯನ್ನು ಬುಧವಾರ ಬಿಡುಗಡೆ ಮಾಡಲಾಗಿದೆ.

ಯೋಜನೆಯ ಅಡಿ ರಾಜ್ಯದ ಎಲ್ಲಾ ಮಹಿಳೆಯರಿಗೆ ರಾಜ್ಯ ಸಾರಿಗೆಯ ಸಂಸ್ಥೆಯ ಬಸ್ಸುಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗುತ್ತಿದೆ. ಜೂನ್ 11 ರಿಂದ ಶಕ್ತಿ ಯೋಜನೆ ಜಾರಿಗೊಳಿಸಲು ಆಡಳಿತಾತ್ಮಕ ಅನುಮೋದನೆ ನೀಡಿ‌ ಆದೇಶ ಹೊರಡಿಸಲಾಗಿದೆ. ಯೋಜನೆಯಡಿ ವಿಧ್ಯಾರ್ಥಿನಿಯರಿಗೆ ಸೇರಿದಂತೆ ರಾಜ್ಯದ ಮಹಿಳೆಯರಿಗೆ ಮಾತ್ರ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗುತ್ತದೆ.

ಮಹಿಳಾ ಪ್ರಯಾಣಿಕರ ಪೈಕಿ 6 ರಿಂದ 12 ವರ್ಷದವರೆಗಿನ ಬಾಲಕಿಯರು, ಲಿಂಗತ್ವ ಅಲ್ಪಅಸಂಖ್ಯಾತರಿಗೂ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗುತ್ತದೆ. ನಗರ ಸಾರಿಗೆ, ಸಾಮಾನ್ಯ ಮತ್ತು ‌ವೇಗದೂತ ಸಾರಿಗೆಗಳಲ್ಲಿ ರಾಜ್ಯಾದ್ಯಂತ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗುತ್ತದೆ. ಐಷಾರಾಮಿ ಬಸ್ಸುಗಳಲ್ಲಿ ಮಹಿಳೆಯರ‌ ಉಚಿತ ಪ್ರಯಾಣಕ್ಕೆ ಅವಕಾಶ ಇಲ್ಲ ಎಂದು 10 ಪುಟಗಳ ಮಾರ್ಗಸೂಚಿಯಲ್ಲಿ ಉಲ್ಲೇಖಿಸಲಾಗಿದೆ.

ರಾಜ್ಯ ಸರ್ಕಾರದ ಶಕ್ತಿ ಯೋಜನೆಯಡಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನಾಲ್ಕು ಸಂಸ್ಥೆಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದಾಗಿದ್ದು, ಕೆಲವೊಂದು ಷರತ್ತುಗಳೊಂದಿಗೆ ಸೌಲಭ್ಯ ಒದಗಿಸಲು ಆದೇಶಿಸಲಾಗಿದೆ.

ರಾಜ್ಯದ ನಾಲ್ಕು ನಿಗಮಗಳಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕ.ರಾ.ರ.ಸಾ.ನಿಗಮ), ಬೆ೦ಗಳೂರು ಮಹಾನಗರ ಸಾರಿಗೆ ಸ೦ಸ್ಥೆ (ಬೆ೦.ಮ.ಸಾ.ಸ೦ಸ್ಥೆ), ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸ೦ಸ್ಥೆ (ವಾ.ಕ.ರ.ಸಾ.ಸ೦ಸ್ಥೆ) ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳ (ಕ.ಕ.ರ.ಸಾ.ನಿಗಮ) ಸಾರಿಗೆಗಳಲ್ಲಿ ಕರ್ನಾಟಕ ರಾಜ್ಯಾದ್ಯಂತ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದಾಗಿದೆ.

ನಗರ, ಸಾಮಾನ್ಯ ಹಾಗೂ ವೇಗದೂತ (ಐ/65) ಬಸ್ಸುಗಳಲ್ಲಿ ಕರ್ನಾಟಕ ರಾಜ್ಯದ ಎಲ್ಲಾ ಮಹಿಳೆಯರು (ವಿದ್ಯಾರ್ಥಿನಿಯರು ಸೇರಿದಂತೆ) ಮತ್ತು ಲಿಂಗತ್ವ ಅಲ್ಪಸಂಖ್ಯಾತರು ಉಚಿತವಾಗಿ ಪ್ರಯಾಣಿಸಬಹುದಾಗಿದೆ ಎಂದು ಸರ್ಕಾರ ಇತ್ತೀಚೆಗೆ ಹೊರಡಿಸಿದ್ದ ಅಧಿಸೂಚನೆಯಲ್ಲಿ ತಿಳಿಸಿತ್ತು.

ಮಾರ್ಗಸೂಚಿಯಲ್ಲಿ ಏನೇನಿದೆ?

ಸರ್ಕಾರಿ ಬಸ್​ಗಳಲ್ಲಿ ವಿದ್ಯಾರ್ಥಿನಿಯರು ಸೇರಿದಂತೆ ರಾಜ್ಯದ ಎಲ್ಲಾ ಮಹಿಳೆಯರಿಗೆ ಉಚಿತ ಪ್ರಯಾಣದ ಅವಕಾಶ

ಸ್ಮಾರ್ಟ್​ಕಾರ್ಡ್​ ಪಡೆಯುವವರೆಗೆ ಗುರುತಿನ ಚೀಟಿ ತೋರಿಸಿ ಪ್ರಯಾಣ

ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ, ಚಾಲನಾ ಪರವಾನಗಿ ತೋರಿಸಿ ಪ್ರಯಾಣಿಸಬಹುದು

ಸರ್ಕಾರದ ಅಂಗವಿಕಲರ ಕಾರ್ಡ್, ಹಿರಿಯ ನಾಗರಿಕರ ಗುರುತಿನ ಚೀಟಿ ಕೂಡ ತೋರಿಸಿ ಪ್ರಯಾಣಿಸಬಹುದು

ರಾಜಹಂಸ, ನಾನ್ ಎಸಿ ಸ್ಲೀಪರ್, ಎಸಿ ಸ್ಲೀಪರ್, ಐರಾವತ, ಅಂಬಾರಿ, ಅಂಬಾರಿ ಡ್ರೀಮ್ ಕ್ಲಾಸ್, ಫ್ಲೈಬಸ್​ಗಳಲ್ಲಿ ಉಚಿತ ಪ್ರಯಾಣ ಅನ್ವಯಿಸಲ್ಲ

ಮಹಿಳಾ ಪ್ರಯಾಣಿಕರಿಗೆ ಉಚಿತ ಪ್ರಯಾಣಕ್ಕೆ ದೂರದ ಯಾವುದೇ ಮಿತಿಯಿಲ್ಲ

ರಾಜ್ಯದ ಒಳಗೆ ಮಾತ್ರ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ

ಅಂತಾರಾಜ್ಯ ಬಸ್​ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶವಿಲ್ಲ

ನಿಗದಿಗಿಂತ ಹೆಚ್ಚಿನ ಪ್ರಮಾಣದ ಲಗೇಜ್ ತಂದರೆ ಟಿಕೆಟ್ ಪಡೆಯಬೇಕು

ಸೇವಾ ಸಿಂಧು ಮೂಲಕ ಅರ್ಜಿ ಸಲ್ಲಿಸಿ ಶಕ್ತಿ ಸ್ಮಾರ್ಟ್​ಕಾರ್ಡ್​ ಪಡೆಯಬೇಕು

Join Whatsapp
Exit mobile version