Home ಟಾಪ್ ಸುದ್ದಿಗಳು ಕರ್ನಾಟಕ ಸರ್ಕಾರ ಸಚಿವಾಲಯ ನೌಕರರ ಸಂಘದ ಬಂದ್ ಯಶಸ್ವಿ

ಕರ್ನಾಟಕ ಸರ್ಕಾರ ಸಚಿವಾಲಯ ನೌಕರರ ಸಂಘದ ಬಂದ್ ಯಶಸ್ವಿ

ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಚಿವಾಲಯ ನೌಕರರ ಸಂಘ ಕರೆ ನೀಡಿದ್ದ “ಸಚಿವಾಲಯ” ಬಂದ್ ಬಹುತೇಕ ಯಶಸ್ವಿಯಾಗಿದೆ. ಅಧಿಕಾರಿಗಳನ್ನು ಹೊರತುಪಡಿಸಿ 85% ರಿಂದ 90%ರಷ್ಟು ಸಿಬ್ಬಂದಿ ಇಂದು ಕಚೇರಿಗೆ ಹಾಜರಾಗದೆ ಬಂದ್ ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.

ಸಚಿವಾಲಯದ ಸಿಬ್ಬಂದಿ ಕಡ್ಡಾಯವಾಗಿ ಕಚೇರಿಗೆ ಹಾಜರಾಗುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಸುತ್ತೋಲೆ ಹೊರಡಿಸಿದ್ದರು. ಸಚಿವಾಲಯದ ನೌಕರರ ಸಂಘದವರು ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಬಂದ್ ಗೆ ಕರೆ ನೀಡಿರುವುದು ಕಾನೂನು ಬಾಹಿರವಾಗಿದೆ ಎಂದು ಹೇಳಿದ್ದರು. ಆದರೆ, ಇದ್ಯಾವುದಕ್ಕೂ ಕ್ಯಾರೇ ಎನ್ನದ ಸಚಿವಾಲಯ ಸಿಬ್ಬಂದಿ, ತಮ್ಮ ತಮ್ಮ ಕಚೇರಿಗೆ ಹಾಜರಾಗದೆ ಬಂದ್ ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.

Join Whatsapp
Exit mobile version