Home ಟಾಪ್ ಸುದ್ದಿಗಳು ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಮತ್ತೊಂದು ವರ್ಗಾವಣೆ: 50 ಪಿಎಸ್​ಐ ಟ್ರಾನ್ಸ್​ಫರ್

ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಮತ್ತೊಂದು ವರ್ಗಾವಣೆ: 50 ಪಿಎಸ್​ಐ ಟ್ರಾನ್ಸ್​ಫರ್

ಬೆಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದಿದ್ದೇ ತಡ ಎಗ್ಗಿಲ್ಲದೆ ಅಧಿಕಾರಿಗಳ ವರ್ಗಾವಣೆ ನಡೆಯುತ್ತಿದೆ.

ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸರ್ಕಾರ ವರ್ಗಾವಣೆ ದಂಧೆಯನ್ನು ಆರಂಭಿಸಿದೆ ಎಂದು ವಿಪಕ್ಷಗಳು ಗಂಭೀರ ಆರೋಪಗಳನ್ನು ಮಾಡುತ್ತಿವೆ. ಇದರ ಬೆನ್ನಲ್ಲೇ ಇದೀಗ ಮತ್ತೆ ರಾಜ್ಯ ಸರ್ಕಾರ, ಗೃಹ ಇಲಾಖೆಯಲ್ಲಿ ಮತ್ತೊಂದು ಸುತ್ತಿನ ವರ್ಗಾವಣೆ ಮಾಡಿದೆ.

ಮೊನ್ನೇ ಅಷ್ಟೇ ಬರೋಬ್ಬರಿ 211 ಇನ್ಸ್​ಪೆಕ್ಟರ್​ಗಳನ್ನು ವರ್ಗಾವಣೆ ಮಾಡಿದ್ದು, ಇದರಲ್ಲಿ ಬೆಳಗಾಗುವಷ್ಟರಲ್ಲೇ ವರ್ಗಾವಣೆಗೆ ತಡೆ ನೀಡಿತ್ತು. ಇಂದು(ಆಗಸ್ಟ್ 03) ಮತ್ತೆ 50 ಪಿಎಸ್​​​​ಐಗಳನ್ನು ವರ್ಗಾವಣೆಗೊಳಿಸಲಾಗಿದೆ.

ಮೊನ್ನೇ ಅಷ್ಟೇ ರಾಜ್ಯದ 211 ಪೊಲೀಸ್‌ ಇನ್ಸ್‌ಪೆಕ್ಟರ್‌ಗಳ ವರ್ಗಾವಣೆ ಮಾಡಿದ್ದ ಸರ್ಕಾರ, ಬೆಳಗಾಗುವಷ್ಟರಲ್ಲೇ 19 ಪೊಲೀಸ್‌ ಇನ್ಸ್‌ಪೆಕ್ಟರ್‌ಗಳ ವರ್ಗಾವಣೆ ತಡೆಹಿಡಿದು ವಿಪಕ್ಷಗಳ ಆರೋಪಕ್ಕೆ ಪುಷ್ಟಿ ನೀಡಿದಂತಾಗಿತ್ತು. ಈಗ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮತ್ತೊಂದು ವರ್ಗಾವಣೆಯಾಗಿದ್ದು, ಈ ಬಾರಿ ಒಟ್ಟು 50 ಪಿಎಸ್​​​​ಐಗಳನ್ನು ವರ್ಗಾವಣೆಗೊಳಿಸಲಾಗಿದೆ.

Join Whatsapp
Exit mobile version