ಕರ್ನಾಟಕ ರಾಜ್ಯಪಾಲರ ಕಾರು ಚಾಲಕ ಹೃದಯಾಘಾತದಿಂದ ಮೃತ್ಯು

Prasthutha|

ಬೆಂಗಳೂರು: ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಕಾರು ಚಾಲಕ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

- Advertisement -

ರವಿಕುಮಾರ್ ಎಸ್. ಕಾಳೆ ಮೃತಪಟ್ಟ ದುರ್ದೈವಿ.  ಕಳೆದ ಮಧ್ಯ ರಾತ್ರಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ರಾಜ್ಯಪಾಲರನ್ನು ಕರೆದೊಯ್ಯಲು ಬಂದಿದ್ದ  ಚಾಲಕ ರವಿಕುಮಾರ್ ಅವರಿಗೆ ದಿಢೀರ್ ಎದೆ ನೋವು ಕಾಣಿಸಿಕೊಂಡು ಹೃದಯಾಘಾತವಾಗಿದೆ. ಕೂಡಲೇ ಪ್ರಥಮ ಚಿಕಿತ್ಸೆ ನೀಡಿ ಆಸ್ಟರ್ ಆಸ್ಪತ್ರೆಗೆ  ದಾಖಲಿಸಲಾಗಿತ್ತು.   ಮಧ್ಯರಾತ್ರಿ 2:20 ರ ವೇಳೆ ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.


ಪ್ರಸ್ತುತ  ಘಟನೆಯ ಹಿನ್ನೆಲೆಯಲ್ಲಿ  ರಾಜ್ಯಪಾಲರು ಹೆಚ್ಚುವರಿ ವಾಹನ ಬಳಸಿಕೊಂಡು ರಾಜ್ಯಭವನಕ್ಕೆ ತೆರಳಿದ್ದಾರೆ‌.

Join Whatsapp
Exit mobile version