ಬೆಂಗಳೂರು : ಐಪಿಎಸ್ ಅಧಿಕಾರಿ ರವಿ ಡಿ ಚನ್ನಣ್ಣನವರ್ ಅವರನ್ನು ಕರ್ನಾಟಕ ಮಹರ್ಷಿ ವಾಲ್ಮಿಕಿ ಪರಿಶಿಷ್ಟ ಪಂಗಡದ ಅಭಿವೃದ್ಧಿ ನಿಗಮದ ಎಂಡಿಯಾಗಿ ವರ್ಗಾವಣೆ ಮಾಡಿ ಹೊರಡಿಸಲಾಗಿದ್ದ ಆದೇಶವನ್ನು ಕರ್ನಾಟಕ ಸರಕಾರ ತಡೆಹಿಡಿದಿದೆ.
ಇವರನ್ನು ನಿನ್ನೆಯಷ್ಟೆ ಸಿಐಡಿಯಿಂದ, ಕರ್ನಾಟಕ ಮಹರ್ಷಿ ವಾಲ್ಮಿಕಿ ಪರಿಶಿಷ್ಟ ಪಂಗಡದ ಅಭಿವೃದ್ಧಿ ನಿಗಮದ ಎಂಡಿಯಾಗಿ ವರ್ಗಾವಣೆ ಮಾಡಲಾಗಿತ್ತು.ಇದೀಗ ಕರ್ನಾಟಕ ಸರ್ಕಾರ ಏಕಾಏಕಿ ರವಿ ಡಿ ಚನ್ನಣ್ಣನವರ್ ಅವರ ವರ್ಗಾವಣೆ ಆದೇಶನ್ನು ತಡೆಯಿಡಿಲಾಗಿದೆ ಎಂದು ಸುತ್ತೋಲೆ ಹೊರಡಿಸಿದೆ. ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ರವಿ ರವಿ ಡಿ ಚನ್ನಣ್ಣನವರ್ ವರ್ಗಾವಣೆಗೆ ಸರ್ಕಾರ ತಡೆ ಹಿಡಿದಿದೆ.
ಐಪಿಎಸ್ ಅಧಿಕಾರಿ ರವಿ ಡಿ ಚನ್ನಣ್ಣವರ ವಿರುದ್ಧ ಭ್ರಷ್ಟಾಚಾರದ ಗಂಭೀರ ಆರೋಪಗಳು ಸದ್ಯ ಕೇಳಿಬರುತ್ತಿವೆ. ಸಾಮಾಜಿಕ ಜಾಲತಾಣಗಳಲ್ಲಿ ಇವರ ವಿಚಾರವಾಗಿ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಈ ನಡುವೆ ತಮ್ಮ ವಿರುದ್ಧ ಸುದ್ದಿ ಪ್ರಕಟಿಸದಂತೆ ಕೋರ್ಟ್ ನಿಂದ ತಡೆಯಾಜ್ಞೆ ಕೂಡ ತಂದಿದ್ದಾರೆ.