ರವಿ ಡಿ ಚನ್ನಣ್ಣನವರ್ ವರ್ಗಾವಣೆ ತಡೆಹಿಡಿದ ಕರ್ನಾಟಕ ಸರ್ಕಾರ

Prasthutha: January 28, 2022

ಬೆಂಗಳೂರು : ಐಪಿಎಸ್ ಅಧಿಕಾರಿ ರವಿ ಡಿ ಚನ್ನಣ್ಣನವರ್ ಅವರನ್ನು ಕರ್ನಾಟಕ ಮಹರ್ಷಿ ವಾಲ್ಮಿಕಿ ಪರಿಶಿಷ್ಟ ಪಂಗಡದ ಅಭಿವೃದ್ಧಿ ನಿಗಮದ ಎಂಡಿಯಾಗಿ ವರ್ಗಾವಣೆ ಮಾಡಿ ಹೊರಡಿಸಲಾಗಿದ್ದ ಆದೇಶವನ್ನು ಕರ್ನಾಟಕ ಸರಕಾರ ತಡೆಹಿಡಿದಿದೆ.

ಇವರನ್ನು ನಿನ್ನೆಯಷ್ಟೆ ಸಿಐಡಿಯಿಂದ, ಕರ್ನಾಟಕ ಮಹರ್ಷಿ ವಾಲ್ಮಿಕಿ ಪರಿಶಿಷ್ಟ ಪಂಗಡದ ಅಭಿವೃದ್ಧಿ ನಿಗಮದ ಎಂಡಿಯಾಗಿ ವರ್ಗಾವಣೆ ಮಾಡಲಾಗಿತ್ತು.ಇದೀಗ ಕರ್ನಾಟಕ ಸರ್ಕಾರ ಏಕಾಏಕಿ ರವಿ ಡಿ ಚನ್ನಣ್ಣನವರ್ ಅವರ ವರ್ಗಾವಣೆ ಆದೇಶನ್ನು ತಡೆಯಿಡಿಲಾಗಿದೆ ಎಂದು ಸುತ್ತೋಲೆ ಹೊರಡಿಸಿದೆ. ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ರವಿ ರವಿ ಡಿ ಚನ್ನಣ್ಣನವರ್ ವರ್ಗಾವಣೆಗೆ ಸರ್ಕಾರ ತಡೆ ಹಿಡಿದಿದೆ.

ಐಪಿಎಸ್‌ ಅಧಿಕಾರಿ ರವಿ ಡಿ ಚನ್ನಣ್ಣವರ ವಿರುದ್ಧ ಭ್ರಷ್ಟಾಚಾರದ ಗಂಭೀರ ಆರೋಪಗಳು ಸದ್ಯ ಕೇಳಿಬರುತ್ತಿವೆ. ಸಾಮಾಜಿಕ ಜಾಲತಾಣಗಳಲ್ಲಿ ಇವರ ವಿಚಾರವಾಗಿ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಈ ನಡುವೆ ತಮ್ಮ ವಿರುದ್ಧ ಸುದ್ದಿ ಪ್ರಕಟಿಸದಂತೆ ಕೋರ್ಟ್ ನಿಂದ ತಡೆಯಾಜ್ಞೆ ಕೂಡ ತಂದಿದ್ದಾರೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!