ಬ್ಲ್ಯಾಕ್ ಫಂಗಸ್ ಗೆ ಉಚಿತ ಚಿಕಿತ್ಸೆ ನೀಡಲು ರಾಜ್ಯ ಸರ್ಕಾರ ನಿರ್ಧಾರ

Prasthutha|

ಬೆಂಗಳೂರು : ರಾಜ್ಯಾದ್ಯಂತ ಕೊರೋನಾ ವೈರಸ್ ತೀವ್ರ ಹೆಚ್ಚಳದಿಂದ ಜನತೆ ಕಂಗೆಟ್ಟು ಹೋಗಿದ್ದು, ಈ ನಡುವೆ ಕಂಡು ಬಂದ ಮತ್ತೊಂದು ಮಾರಣಾಂತಿಕ ಖಾಯಿಲೆ ಬ್ಲ್ಯಾಕ್ ಫಂಗಸ್ ಗೆ ಉಚಿತವಾಗಿ ಚಿಕಿತ್ಸೆ ನೀಡುವುದಾಗಿ ರಾಜ್ಯ ಸರ್ಕಾರ ಘೋಷಣೆ ಮಾಡಿದೆ.

- Advertisement -

ಬ್ಲ್ಯಾಕ್ ಫಂಗಸ್ ಚಿಕಿತ್ಸೆ ಬಗ್ಗೆ ವಿಕ್ಟೋರಿಯಾ ಆಸ್ಪತ್ರೆ ಇಎನ್ ಟಿ ಮುಖ್ಯಸ್ಥ ಡಾ.ಎಚ್.ಎಸ್ ಸತೀಶ್ ನೇತೃತ್ವದಲ್ಲಿ ರಚಿಸಿರುವ ತಜ್ಞರ ಸಮಿತಿಯೊಂದಿಗೆ ಸಭೆ ನಡೆಸಿ ಮಾತನಾಡಿದ ಆರೋಗ್ಯ ಸಚಿವ ಡಾ.ಕೆ. ಸುಧಾಕರ್, ಬ್ಲ್ಯಾಕ್ ಫಂಗಸ್ ಅನ್ನು ಅಧಿಸೂಚಿತ ಕಾಯಿಲೆಯಂದು ಪರಿಗಣಿಸಿದೆ. ಹೀಗಾಗಿ ಯಾವುದೇ ವೈದ್ಯರು ಈ ಕಾಯಿಲೆಯನ್ನು ಮುಚ್ಚಿಡುವಂತಿಲ್ಲ. ಅತಿಯಾದ ಸ್ಟೆರಾಯ್ಡ್ ಬಳಕೆಯೂ ಬ್ಲ್ಯಾಕ್ ಫಂಗಸ್ ಗೆ ಕಾರಣವಾಗಿರುವ ಹಿನ್ನೆಲೆಯಲ್ಲಿ ವೈದ್ಯರ ಸಲಹೆ ಇಲ್ಲದೆ ಸ್ಟೆರಾಯ್ಡ್ ಬಳಸುವಂತಿಲ್ಲ ಎಂದು ಕಟ್ಟುನಿಟ್ಟಿನ ಸೂಚನೆಯನ್ನು ಸರ್ಕಾರ ನೀಡಿದೆ.

ಬ್ಲ್ಯಾಕ್ ಫಂಗಸ್ ಖಾಯಿಲೆಗೆ ಬೆಂಗಳೂರಿನ ಬೌರಿಂಗ್ ಆಸ್ಪತ್ರೆ, ಮೈಸೂರು ವೈದ್ಯಕೀಯ ಕಾಲೇಜು, ಶಿವಮೊಗ್ಗ ವೈದ್ಯಕೀಯ ಕಾಲೇಜು, ಮಣಿಪಾಲ, ಮಂಗಳೂರಿನ ವೆನ್ ಲಾಕ್, ಕಲಬುರಗಿಯ ಜಿಮ್ಸ್, ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

Join Whatsapp