ಬೆಂಗಳೂರು : ಕರ್ನಾಟಕದಲ್ಲಿ ಇದೀಗ ಮತ್ತೆ ಕೊರೋನಾ ಸೊಂಕಿನ ಪ್ರಮಾಣ ಹೆಚ್ಚಳವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಕರ್ನಾಟಕ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ.
ಬಸ್ ಹಾಗೂ ರೈಲು ಪ್ರಯಾಣಿಸುವ ಸಂದರ್ಭದಲ್ಲಿ ಸಾರ್ವಜನಿಕರು ಮಾಸ್ಕ್ ಧರಿಸುವುದು ಕಡ್ಡಾಯ ಎಂದು ರಾಜ್ಯ ಸರ್ಕಾರ ಬಿಡುಗಡೆ ಮಾಡಿದ ಮಾರ್ಗಸೂಚಿಯಲ್ಲಿ ತಿಳಿಸಿದೆ.
ILI & SARI ಲಕ್ಷಣಗಳನ್ನು ಹೊಂದಿದವರು, ಹೈರಿಸ್ಟ್ ಗುಂಪಿನವರು ಹಾಗೂ ಇತರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರನ್ನು ಆದ್ಯತೆಯ ಮೇಲೆ ಪರೀಕ್ಷೆಗೆ ಒಳಪಡುವುದು ಹಾಗೂ ಫಲಿತಾಂಶ ಲಭ್ಯವಾಗುವವರೆಗೂ ಮನೆಯಲ್ಲಿಯೇ ಪ್ರತ್ಯೇಕವಾಗಿರುವುದು ಕಡ್ಡಾಯ ಎಂದು ಮಾರ್ಗಸೂಚಿಯಲ್ಲಿ ತಿಳಿಸಿದೆ.