40 ಪರ್ಸೆಂಟ್​ ಕಮಿಷನ್ ಆರೋಪ ಪ್ರಕರಣ​ ನ್ಯಾಯಾಂಗ ತನಿಖೆಗೆ ಆದೇಶಿಸಿದ ಸರ್ಕಾರ

Prasthutha|

ಬೆಂಗಳೂರು: ವಿಧಾನಸಭಾ ಚುನಾವಣೆ ಮುನ್ನ ಕರ್ನಾಟಕದಲ್ಲಿ ಭಾರೀ ಸದ್ದು ಮಾಡಿದ್ದ ಬಿಜೆಪಿ ಸರಕಾರದ 40 ಪರ್ಸೆಂಟ್ ಕಮಿಷನ್ ಆರೋಪವನ್ನು ಇದೀಗ ಸಿದ್ದರಾಮಯ್ಯ ಸರ್ಕಾರ ನ್ಯಾಯಾಂಗ ತನಿಖೆಗೆ ವಹಿಸಿದೆ. ರಾಜ್ಯ ಗುತ್ತಿಗೆದಾರರ ಸಂಘದ ಕೆಂಪಣ್ಣ ಮಾಡಿದ್ದ ಕಮಿಷನ್ ಆರೋಪದ ತನಿಖೆಯನ್ನು ಹೈಕೋರ್ಟ್​ ನಿವೃತ್ತ ನ್ಯಾಯಮೂರ್ತಿ ಎಚ್​ಎನ್​ ನಾಗಮೋಹನ್​ ದಾಸ್ ನೇತೃತ್ವದಲ್ಲಿ ಸಮಿತಿ ರಚಿಸಿ ರಾಜ್ಯ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ.

- Advertisement -

ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದ ಅಗತ್ಯ ಕಡತ, ದಾಖಲೆಗಳನ್ನು ಆಯಾ ಇಲಾಖೆಯ ಅಧಿಕಾರಿಗಳು ಈ ತನಿಖಾ ಸಮಿತಿಗೆ ನೀಡಬೇಕು. ಹಾಗೇ ಸ್ಥಳ ಪರಿಶೀಲನೆ ವೇಳೆ ಖುದ್ದು ಹಾಜರಿದ್ದು, ತನಿಖೆಗೆ ಸಹಕಾರ ನೀಡಬೇಕೆಂದು ಹೇಳಿದೆ. ಹಾಗೇ ತನಿಖೆಗೆ ಸಂಬಂಧಿಸಿದಂತೆ ಸಹಾಯಕ್ಕೆ ಅಗತ್ಯವಿರುವ ತಾಂತ್ರಿಕ ಸಲಹೆಗಾರರು, ಆರ್ಥಿಕ ಸಲಹೆಗಾರರು ಹಾಗೂ ಆಡಳಿತಾತ್ಮಕ ಸಲಹೆಗಾರರನ್ನು ತೆಗೆದುಕೊಳ್ಳಬಹುದು ಎಂದು ಸಮಿತಿಗೆ ಆದೇಶದಲ್ಲಿ ತಿಳಿಸಿದೆ.

ಈ ಸಮಿತಿಯು ಸ್ಥಳ ಹಾಗೂ ದಾಖಲಾತಿಗಳನ್ನು ಪರಿಶೀಲಿಸಿ ವಿವರವಾದ ತನಿಖೆ ನಡೆಸಿ, ಲೋಪದೋಷಗಳ ಮಾಹಿತಿ ಹಾಗೂ ಕಾರಣರಾದ ಆರೋಪಿಗಳನ್ನು ಪತ್ತೆ ಮಾಡಿ ಸಂಪೂರ್ಣ ವರದಿಯನ್ನು ಸೂಕ್ತ ಶಿಫಾರಸ್ಸಿನೊಂದಿಗೆ ಒಂದು ತಿಂಗಳ ಒಳಗೆ ನೀಡಬೇಕೆಂದು ಆದೇಶದಲ್ಲಿ ಸೂಚಿಸಿದೆ.

Join Whatsapp