ಶಬರಿಮಲೆಯಲ್ಲಿ ಛತ್ರ ನಿರ್ಮಾಣಕ್ಕೆ ಕರ್ನಾಟಕ ಸರಕಾರದಿಂದ 5 ಕೋಟಿ ಬಿಡುಗಡೆ

Prasthutha|

ಬೆಂಗಳೂರು: ಶಬರಿಮಲೆ, ಮಂತ್ರಾಲಯ ಮತ್ತು ಪಂಡರಪುರದಲ್ಲಿ ಕರ್ನಾಟಕ ಛತ್ರಗಳ ನಿರ್ಮಾಣ ಮತ್ತು ಅಭಿವೃದ್ಧಿಗೆ ವಿಶೇಷ ಅನುದಾನ ಬಿಡುಗಡೆ ಮಾಡುವಂತೆ ಸಿಎಂ ಬಸವರಾಜ ಬೊಮ್ಮಾಯಿ ಹಣಕಾಸು ಇಲಾಖೆಗೆ ಸೂಚನೆ ನೀಡಿದ್ದಾರೆ.

- Advertisement -

ಈ ಕುರಿತು ಮಾತಾಡಿದ ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ  ಕರ್ನಾಟಕದಿಂದ ಹೊರ ರಾಜ್ಯದ ಯಾತ್ರಾ ಸ್ಥಳಗಳಿಗೆ ತೆರಳುವ ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಕರ್ನಾಟಕ ಛತ್ರ ನಿರ್ಮಾಣಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶೇಷ ಅನುದಾನ ಬಿಡುಗಡೆ ಮಾಡಿದ್ದಾರೆ. ಅದರಂತೆ ರಾಜ್ಯದ ಯಾತ್ರಾರ್ಥಿಗಳಿಗೆ ಅನುಕೂಲವಾಗುವಂತೆ ಹೊರ ರಾಜ್ಯದಲ್ಲಿ ಸೌಲಭ್ಯಗಳನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಹೇಳಿದ್ದಾರೆ.

ಶಬರಿಮಲೆಯಲ್ಲಿ ಕರ್ನಾಟಕ ಛತ್ರ ನಿರ್ಮಾಣಕ್ಕಾಗಿ ಸರಕಾರ 5 ಕೋಟಿ ಬಿಡುಗಡಿ ಮಾಡಿದ್ದು, ಈ ಸಂಬಂಧ ಅಧಿಕೃತ ಆದೇಶ ಹೊರಡಿಸಲಾಗಿದೆ. ಹೆಚ್ಚಿನ ಅನುದಾನ ನೀಡುವ ಮೂಲಕ ಇಲಾಖೆಯ ಅಭಿವೃದ್ಧಿಗೆ ಹೆಚ್ಚಿನ ಬೆಂಬಲ ನೀಡಿದ ಮುಖ್ಯಮಂತ್ರಿಗಳನ್ನು ನಾನು ಅಭಿನಂದಿಸಿದ್ದೇನೆ ಎಂದು ಜೊಲ್ಲೆ ಹೇಳಿದರು.

- Advertisement -

ಕಳೆದ ವರ್ಷ ತಿರುಮಲದಲ್ಲಿ ಕರ್ನಾಟಕ ಭವನ ನಿರ್ಮಾಣಕ್ಕೆ 232 ಕೋಟಿ ರೂ.ಗಳ ಬೃಹತ್ ಅನುದಾನವನ್ನು ನೀಡಲಾಗಿದೆ ಆಂಧ್ರಪ್ರದೇಶದ ಶ್ರೀಶೈಲದಲ್ಲಿ ನವ ಕರ್ನಾಟಕ ಛತ್ರ ನಿರ್ಮಾಣಕ್ಕೆ ಈಗಾಗಲೇ 85 ಕೋಟಿ ರೂ.ಗಳ ಅನುದಾನ ಮಂಜೂರಾಗಿದ್ದು, ಶೀಘ್ರದಲ್ಲೇ ನಿರ್ಮಾಣ ಕಾರ್ಯ ಪ್ರಾರಂಭವಾಗಲಿದೆ ಎನ್ನಲಾಗಿದೆ.



Join Whatsapp