ಬಿಹಾರದಂತೆ ಕರ್ನಾಟಕ ಸರ್ಕಾರವೂ ಕೂಡ ಜಾತಿ ವರದಿಯನ್ನು ಬಹಿರಂಗಪಡಿಸಬೇಕು: ಬಿ.ಕೆ ಹರಿಪ್ರಸಾದ್ ಒತ್ತಾಯ

Prasthutha|

ನವದೆಹಲಿ: ಬಿಹಾರದಂತೆ ಕರ್ನಾಟಕ ಸರ್ಕಾರವೂ ಕೂಡ ರಾಜ್ಯದಲ್ಲಿ ಈಗಾಗಲೇ ಸಿದ್ದವಾಗಿರುವ ಹಿಂದುಳಿದ ವರ್ಗಗಳ ಜಾತಿ ವರದಿಯನ್ನು ಬಹಿರಂಗಪಡಿಸಬೇಕು ಎಂದು ಕಾಂಗ್ರೆಸ್ ನಾಯಕ ಹಾಗೂ ವಿಧಾನ ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ಒತ್ತಾಯಿಸಿದ್ದಾರೆ.

- Advertisement -


ನವದೆಹಲಿಯಲ್ಲಿ ಇಂದುಸುದ್ದಿಗಾರದೊಂದಿಗೆ ಮಾತನಾಡಿದ ಬಿಕೆ ಹರಿಪ್ರಸಾದ್, ಬಿಹಾರದಲ್ಲಿ ಜಾತಿ ಸಮೀಕ್ಷೆ ಬಿಡುಗಡೆ ಮಾಡಿದೆ. ಅದಕ್ಕಾಗಿ ಸಿಎಂ ನಿತೀಶ್ ಕುಮಾರ್ ಮತ್ತು ಲಾಲೂ ಪ್ರಸಾದ್ ಅವರಿಗೆ ಧನ್ಯವಾದ ಸಲ್ಲಿಸುತ್ತೇನೆ. ಜಾತಿ ಗಣತಿ ಮೂಲಕ ಜನರಿಗೆ ಹಕ್ಕು ಸಿಗಲಿದೆ. ರಾಹುಲ್ ಗಾಂಧಿಯವರದ್ದು ಜಾತಿ ಗಣತಿ ಆಗಬೇಕು ಎನ್ನುವ ಆಶಯ ಇತ್ತು. ಕರ್ನಾಟಕದಲ್ಲೂ ಸಮೀಕ್ಷೆ ಮಾಡಿದೆ. ಅದನ್ನು ಬಹಿರಂಗ ಮಾಡಬೇಕು ಎಂದರು.


ತಪ್ಪು ಒಪ್ಪುಗಳು ಏನೇ ಇರಬಹುದು. ಅನುಷ್ಠಾನಕ್ಕೆ ಸಾಧ್ಯವಾಗುತ್ತಾ? ಇಲ್ವ ಗೊತ್ತಿಲ್ಲ.? ಸಾರ್ವಜನಿಕರ ಹಣ ಖರ್ಚು ಮಾಡಿದೆ. ಅದನ್ನು ಬಹಿರಂಗ ಮಾಡಬೇಕು, ಚರ್ಚೆಗೆ ಅವಕಾಶ ನೀಡಬೇಕು. ರಾಜ್ಯದಲ್ಲಿ ಯಾವಗ ಬಿಡುಗಡೆ ಮಾಡುತ್ತಾರೆ ಸರ್ಕಾರವನ್ನು ಕೇಳಬೇಕು. ಯಾವುದೇ ಜಾತಿ ಒತ್ತಡ ಹೇರಲಿ, ಮೊದಲು ಬಿಡುಗಡೆ ಮಾಡಬೇಕು. ಆಮೇಲೆ ಯಾರಿಗಾದರೂ ಅನ್ಯಾಯವಾಗಿದರೆ ಸರಿ ಮಾಡಬಹುದು. ಪಕ್ಷದ ಸದಸ್ಯನಾಗಿ ಬಿಡುಗಡೆ ಮಾಡಬೇಕು ಎನ್ನುವುದು ನನ್ನ ಆಶಯ. ಎಂದು ಹೇಳಿದರು.
ಸಿದ್ದರಾಮಯ್ಯ ಅವರು ಕಾಂಗ್ರೆಸ್ ಪಕ್ಷದಿಂದ ಸಿಎಂ ಆಗಿದ್ದಾರೆ. ನಮ್ಮ ನಾಯಕ ರಾಹುಲ್ ಗಾಂಧಿ ಅವರೇ ಜಾತಿ ಗಣತಿ ಆಗಬೇಕು ಎಂದಿದ್ದಾರೆ, ಹೀಗಾಗಿ ನಾವು ಅವರ ಹೇಳಿಕೆಯನ್ನು ಬೆಂಬಲಿಸುತ್ತೇವೆ. ಸಿದ್ದರಾಮಯ್ಯ ಅವರನ್ನು ಪ್ರತ್ಯೇಕ, ಪರೋಕ್ಷ ಟಾರ್ಗೆಟ್ ಮಾಡುವುದು ಏನಿಲ್ಲ ಎಂದು ಸ್ಪಷ್ಟಪಡಿಸಿದರು.



Join Whatsapp