ರಾಜ್ಯ ಸರಕಾರದಿಂದ ರಾಮರಾಜ್ಯದ ಆಶಯ ಜಾರಿ: ದಿನೇಶ್ ಗುಂಡೂರಾವ್

Prasthutha|

ಸುಳ್ಯ: ಸರ್ವರಿಗೂ ನ್ಯಾಯ ಮತ್ತು ಸಮೃದ್ಧ ರಾಜ್ಯ ಕಟ್ಟುವ ನಿಟ್ಟಿನಲ್ಲಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವ ಮೂಲಕ ರಾಜ್ಯ ಸರಕಾರವು ರಾಮರಾಜ್ಯದ ಪರಿಕಲ್ಪನೆಯನ್ನು ಜಾರಿಗೆ ತಂದಿದೆ ಎಂದು ಆರೋಗ್ಯ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

- Advertisement -

ಅವರು ಸುಳ್ಯ ಪುರಭವನದಲ್ಲಿ ಜನತಾ ದರ್ಶನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಜನರು ಆರ್ಥಿಕವಾಗಿ ಸಬಲೀಕರಣಗೊಂಡು ನೆಮ್ಮದಿಯಿಂದ ಬಾಳಬೇಕು ಎಂಬ ಉದ್ದೇಶದಿಂದ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಹಿಂದೆ ಒಂದು ಯೋಜನೆ ರೂಪಿಸಿ ಅನುಷ್ಠಾನಗೊಳಿಸಲು ವರ್ಷ ತಗಲುತ್ತಿತ್ತು. ಆದರೆ, ರಾಜ್ಯ ಸರಕಾರವು ಕ್ಷಿಪ್ರಗತಿಯಲ್ಲಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ನೇರವಾಗಿ ಜನರ ಮನೆಗೆ ತಲುಪಿಸಿದೆ. ಯಾವುದೇ ಮಧ್ಯವರ್ತಿಗಳಿಲ್ಲದೇ, ಜನರೇ ಸ್ವಯಂ ಆಗಿ ಅರ್ಜಿ ಹಾಕಿ ಯೋಜನೆಯ ಲಾಭ ಪಡೆಯುತ್ತಿರುವುದು ಕಲ್ಯಾಣ ಕಾರ್ಯಕ್ರಮಗಳಲ್ಲಿ ಚಾರಿತ್ರಿಕವಾಗಿದೆ ಎಂದು ಸಚಿವರು ಹೇಳಿದರು.



Join Whatsapp