ಕಾಂಗ್ರೆಸ್ ಸರ್ಕಾರದಿಂದ ಪಂಚ ರಾಜ್ಯಗಳಿಗೆ ಹಣದ ಭಾಗ್ಯ, ಕರ್ನಾಟಕಕ್ಕೆ ಕತ್ತಲೆ ಭಾಗ್ಯ: ನಳಿನ್ ಕುಮಾರ್

Prasthutha|

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ಮೇಲೆ ತಮಿಳುನಾಡಿಗೆ ನೀರಿನ ಭಾಗ್ಯ, ಪಂಚ ರಾಜ್ಯಗಳಿಗೆ ಹಣದ ಭಾಗ್ಯ, ಕರ್ನಾಟಕಕ್ಕೆ ಕತ್ತಲೆ ಭಾಗ್ಯ ಸಿಕ್ಕಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಬುಧವಾರ ವ್ಯಂಗ್ಯವಾಡಿದ್ದಾರೆ.

- Advertisement -


ಸಿಎಂ, ಡಿಸಿಎಂ ಅಧಿಕಾರದ ಕಾದಾಟದ ಪರಿಣಾಮ ರಾಜ್ಯದ ಜನತೆ ತೊಂದರೆಗೆ ಸಿಲುಕಿದೆ. ಸಿದ್ದರಾಮಯ್ಯರನ್ನು ಮನೆಗೆ ಕಳಿಸಬೇಕು ಅಂತಾ ಡಿಕೆ ಶಿವಕುಮಾರ್, ಡಿಕೆ ಶಿವಕುಮಾರ್ ಅವರನ್ನು ಜೈಲಿಗೆ ಕಳಿಸಬೇಕು ಅಂತಾ ಸಿದ್ದರಾಮಣ್ಣ ಯತ್ನಿಸುತ್ತಿದ್ದಾರೆ. ಈ ಕಾದಾಟದಲ್ಲಿ ಕರ್ನಾಟಕ ರಾಜ್ಯ ಬಡವಾಗಿದೆ ಎಂದು ಕಟೀಲ್ ಟೀಕಿಸಿದ್ದಾರೆ.


ವರ್ಗಾವಣೆಯಲ್ಲಿ ರೇಟ್ ಫಿಕ್ಸ್ ಮಾಡುವ ಕೆಲಸ ಆಗಿದೆ. ಸಿಎಂ ಕಚೇರಿಯಲ್ಲೇ ಯಾರ್ಯಾರಿಗೆ ಎಷ್ಟೆಷ್ಟು ಅಂತಾ ಬೋರ್ಡ್ ಫಿಕ್ಸ್ ಆಗಿದೆ. ವರ್ಗಾವಣೆಯಿಂದ ಆರಂಭವಾದ ಭ್ರಷ್ಟಾಚಾರ, ಗುತ್ತಿಗೆದಾರರ ಕಮಿಷನ್, ದಸರಾ ಹಬ್ಬದಲ್ಲೂ ಲಜ್ಜೆಗೇಡಿತನದ ಸರ್ಕಾರ ಲಂಚ ಕೇಳಿದೆ. ನೈತಿಕ ಹೊಣೆ ಹೊತ್ತು ಸಿಎಂ, ಡಿಸಿಎಂ ರಾಜೀನಾಮೆ ಕೊಡಬೇಕು ಎಂದು ಕಟೀಲ್ ಆಗ್ರಹಿಸಿದ್ದಾರೆ.

Join Whatsapp