Home ಟಾಪ್ ಸುದ್ದಿಗಳು ಸಿಎಂಗೆ ತಾತ್ಕಾಲಿಕ ರಿಲೀಫ್‌: ಆ.29ಕ್ಕೆ ವಿಚಾರಣೆ ಮುಂದೂಡಿದ ಕರ್ನಾಟಕ ಹೈಕೋರ್ಟ್‌

ಸಿಎಂಗೆ ತಾತ್ಕಾಲಿಕ ರಿಲೀಫ್‌: ಆ.29ಕ್ಕೆ ವಿಚಾರಣೆ ಮುಂದೂಡಿದ ಕರ್ನಾಟಕ ಹೈಕೋರ್ಟ್‌

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ತನ್ನ ವಿರುದ್ಧ ಪ್ರಾಸಿಕ್ಯೂಶನ್ ಗೆ ಅನುಮತಿ ನೀಡಿದ್ದನ್ನು ಪ್ರಶ್ನೆ ಮಾಡಿ ಸಿಎಂ ಸಿದ್ದರಾಮಯ್ಯ ಕರ್ನಾಟಕ ಹೈಕೋರ್ಟ್ ಮೊರೆ ಹೋಗಿದ್ದರು. ಸೋಮವಾರ ವಿಚಾರಣೆ ನಡೆಸಿದ ಕೋರ್ಟ್ ಅರ್ಜಿ ವಿಚಾರಣೆಯನ್ನು ಆಗಸ್ಟ್ 29 ಕ್ಕೆ ಮುಂದೂಡಿದೆ.

ರಾಜ್ಯಪಾಲರ ಪರವಾಗಿ ತುಷಾರ್ ಎಂಬ ವಕೀಲರು, ಸಿದ್ದರಾಮಯ್ಯ ಪರವಾಗಿ ಅಭಿಷೇಕ್ ಮನು ಸಿಂಗ್ವಿಯವರು ವಾದ ಮಂಡನೆ ಮಾಡಿದರು.
ಶನಿವಾರ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಆದೇಶ ನೀಡಿದ್ದರು. ಈ ಬೆನ್ನಲ್ಲೆ ಸಿಎಂ ಅಗತ್ಯ ಕಾನೂನು ಹೋರಾಟಕ್ಕೆ ಮುಂದಾಗಿದ್ದರು. ಸೋಮವಾರ ಬೆಳಿಗ್ಗೆಯೇ ಸಿಎಂ ಹೈಕೋರ್ಟ್ಗೆ ರಿಟ್ ಅರ್ಜಿಯನ್ನು ಸಲ್ಲಿಸಿದ್ದರು. ಮಧ್ಯಾಹ್ನ 3 ಕ್ಕೆ ಕೋರ್ಟ್ ನಲ್ಲಿ ವಾದ ನಡೆಯಿತು.

ವಾದ ಪ್ರತಿವಾದ ಆಲಿಸಿದ ನ್ಯಾಯಾಲಯ ಮುಂದಿನ ವಿಚಾರಣೆಯನ್ನು ಆಗಸ್ಟ್‌ 29ಕ್ಕೆ ಮುಂದೂಡಲಾಗಿದೆ ಎಂದು ತಿಳಿಸಿದೆ. ಇದರ ಜೊತೆಗೆ ಆ29ರ ವರೆಗೂ ವಿಚಾರಣಾ ನ್ಯಾಯಾಲಯಗಳು ಸಿಎಂ ಸಿದ್ದರಾಮಯ್ಯ ವಿರುದ್ಧ ವಿಚಾರಣೆ ತೀರ್ಪು ನೀಡುವಂತಿಲ್ಲ ಎಂದು ಹೇಳಿದೆ.

ಹೈಕೋರ್ಟ್‌ನಲ್ಲಿ ಮುಂದಿನ ವಿಚಾರಣೆಯ ದಿನಾಂಕದವರೆಗೆ ರಾಜ್ಯಪಾಲರ ಅನುಮತಿಯ ಆಧಾರದ ಮೇಲೆ ಸಿದ್ದರಾಮಯ್ಯ ವಿರುದ್ಧ ಯಾವುದೇ ಕ್ರಮಗಳನ್ನು ತೆಗೆದುಕೊಳ್ಳದಂತೆ ಉಚ್ಛ ನ್ಯಾಯಾಲಯವು ವಿಚಾರಣಾ ನ್ಯಾಯಾಲಯಗಳಿಗೆ ಸೂಚಿಸಿದೆ.

Join Whatsapp
Exit mobile version