ಮುಸ್ಲಿಮರು ಹೆಚ್ಚಾಗಿರುವ ಪ್ರದೇಶವನ್ನು ಪಾಕಿಸ್ತಾನ ಎಂದು ಕರೆದ ಕರ್ನಾಟಕ ಹೈಕೋರ್ಟ್ ನ್ಯಾಯಾಧೀಶ: ವ್ಯಾಪಕ ಟೀಕೆ

Prasthutha|

ಬೆಂಗಳೂರು: ಇಲ್ಲಿನ ಗೋರಿಪಾಳ್ಯದ ಕುರಿತು ಉಲ್ಲೇಖಿಸುವಾಗ, ಮುಸ್ಲಿಮ್ ಸಮುದಾಯ ಹೆಚ್ಚಾಗಿರುವ ಪ್ರದೇಶವನ್ನು ಪಾಕಿಸ್ತಾನ ಎಂದು ಕರ್ನಾಟಕ ಹೈಕೋರ್ಟ್ ನ್ಯಾಯಾಧೀಶ ವೇದವ್ಯಾಸಾಚಾರ್ ಶ್ರೀಷಾನಂದ ಕರೆದಿರುವುದಾಗಿ ವರದಿಯಾಗಿದೆ. ಈ ಕುರಿತ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

- Advertisement -

ಇತ್ತೀಚೆಗೆ ನಡೆದ ವಿಚಾರಣೆಯೊಂದರ ಸಂದರ್ಭದಲ್ಲಿ, “ಮೈಸೂರು ರಸ್ತೆ ಮೇಲುಸೇತುವೆಗೆ ಹೋಗಿ ನೋಡಿ, ಪ್ರತಿ ಆಟೋರಿಕ್ಷಾದಲ್ಲೂ 10 ಮಂದಿಯಿರುತ್ತಾರೆ.
ಇಲ್ಲಿ ಕಾನೂನು ಅನ್ವಯಿಸುವುದಿಲ್ಲ. ಯಾಕೆಂದರೆ, ಮೈಸೂರು ಮೇಲ್ಸೇತುವೆಯು ಗೋರಿಪಾಳ್ಯದಿಂದ ಎಡಕ್ಕೆ ಮಾರುಕಟ್ಟೆಗೆ ತೆರಳುತ್ತದೆ. ಇದು ಪಾಕಿಸ್ತಾನದಲ್ಲಿದೆ, ಭಾರತದಲ್ಲಲ್ಲ. ಇದು ವಾಸ್ತವ. ಅಲ್ಲಿಗೆ ಎಷ್ಟೇ ಕಟ್ಟುನಿಟ್ಟಿನ ಪೊಲೀಸ್ ಅಧಿಕಾರಿಯನ್ನು ನೇಮಕ ಮಾಡಿದರೂ, ಅವರನ್ನು ಥಳಿಸಲಾಗುತ್ತೆ” ಎಂದು ವೇದವ್ಯಾಸಾಚಾರ್ ಶ್ರೀಷಾನಂದ ಸಾಯಿ ಹೇಳಿದ್ದಾರೆ.


ಸಾಂವಿಧಾನಿಕ ಹುದ್ದೆಯಲ್ಲಿರುವವರೊಬ್ಬರು ಇಂತಹ ಹೇಳಿಕೆಯನ್ನು ನೀಡಲು ಹೇಗೆ ಸಾಧ್ಯ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.



Join Whatsapp
Exit mobile version