ಬೆಂಗಳೂರು: ರಾಜ್ಯ ಸರ್ಕಾರ ನಡೆಸಲು ಉದ್ದೇಶಿಸಿದ್ದ 5 ಮತ್ತು 8 ನೇ ತರಗತಿಯ ಪಬ್ಲಿಕ್ ಪರೀಕ್ಷೆಗಳನ್ನು ರದ್ದುಗೊಳಿಸಿ ಕರ್ನಾಟಕ ಹೈಕೋರ್ಟ್ ಆದೇಶ ಹೊರಡಿಸಿದೆ.
ಸಿಲೆಬಸ್ ನೀಡದೆ ಪರೀಕ್ಷೆ ನಡೆಸುವುದು ಹೇಗೆ ಎಂದು ಏಕಸದಸ್ಯ ಪೀಠ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.
ಈ ಬಾರಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ರಾಜ್ಯದ 5ನೇ ತರಗತಿ ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಯನ್ನು ನಡೆಸಲು ನಿರ್ಧರಿಸಿತ್ತು, ಆದರೆ ಇದೀಗ ಹೈಕೋರ್ಟ್ ಏಕಸದಸ್ಯ ಪೀಠ ಬೋರ್ಡ್ ಪರೀಕ್ಷೆ ರದ್ದುಗೊಳಿಸಿ ಆದೇಶ ಹೊರಡಿಸಿದೆ. ಮುಂದಿನ ವರ್ಷದಿಂದ ಪರೀಕ್ಷೆ ನಡೆಸಬಹುದು, ಆಯಾ ನಿಯಮಗಳಿಗನುಸಾರವಾಗಿ ಪರೀಕ್ಷೆ ನಡೆಸಬಹುದು ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.