ಕರ್ನಾಟಕದ ಹೈಕೋರ್ಟ್ ತೀರ್ಪಿನಿಂದ ನಿರಾಸೆ: ಎಸ್ ಐಒ

Prasthutha|

ಬೆಂಗಳೂರು: ಕರ್ನಾಟಕದ ಹೈಕೋರ್ಟ್ ಇಂದು ನೀಡಿದ ತೀರ್ಪಿನಿಂದ ನಮಗೆ ನಿರಾಸೆಯಾಗಿದೆ. ಹಿಜಾಬ್ ಇತರರಿಗೆ ಹಾನಿ ಮಾಡುವುದಿಲ್ಲ ಅಥವಾ ಮನ ನೋಯಿಸುವುದಿಲ್ಲ.  ವಿದ್ಯಾರ್ಥಿಗಳನ್ನು ತಮ್ಮ ಆತ್ಮಸಾಕ್ಷಿ ಮತ್ತು ಶಿಕ್ಷಣದ ನಡುವೆ ಆಯ್ಕೆ ಮಾಡಿಕೊಳ್ಳುವ ಸ್ಥಿತಿಗೆ ನ್ಯಾಯಾಲಯವು ತರಲಾರದು  ಎಂದು ನಾವು ನಿರೀಕ್ಷಿಸಿದ್ದೇವು. ಧಾರ್ಮಿಕ ಆಚರಣೆಗಳು ವ್ಯಕ್ತಿ ಮತ್ತು ದೇವನ ನಡುವಿನ ಸಂಬಂಧದ ಮೂಲಭೂತ ಅಂಶವಾಗಿದೆ ಮತ್ತು ಎಲ್ಲರೂ ಇದನ್ನು ಗೌರವಿಸಬೇಕು ಎಂದು ಎಸ್ ಐಒ ಕರ್ನಾಟಕ ಟ್ವೀಟ್ ಮಾಡಿದೆ.

- Advertisement -

ಹಿಜಾಬ್ ಗೆ ಅವಕಾಶ ನೀಡುವಂತೆ ಕೋರಿ ವಿದ್ಯಾರ್ಥಿನಿಯರು ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಕರ್ನಾಟಕ ಹೈಕೋರ್ಟ್, ಹಿಜಾಬ್ ಇಸ್ಲಾಮಿನ ಅತ್ಯಗತ್ಯ ಭಾಗವಲ್ಲ ಎಂದು ಹೈಕೋರ್ಟ್ ಮಂಗಳವಾರ ತೀರ್ಪು ನೀಡಿದೆ.

Join Whatsapp
Exit mobile version