ಹುಬ್ಬಳ್ಳಿ ಈದ್ಗಾ ಮೈದಾನಕ್ಕೆ ಕಿತ್ತೂರು ರಾಣಿ ಚೆನ್ನಮ್ಮ ಹೆಸರು ಪ್ರಶ್ನಿಸಿದ್ದ ಪಿಐಎಲ್ ವಜಾ

Prasthutha|

ಹುಬ್ಬಳ್ಳಿ: ಹುಬ್ಬಳ್ಳಿಯ ಈದ್ಗಾ ಮೈದಾನಕ್ಕೆ ಕಿತ್ತೂರು ರಾಣಿ ಚೆನ್ನಮ್ಮ ಹೆಸರಿಡುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (PIL) ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠ ಸೋಮವಾರ ವಜಾಗೊಳಿಸಿದೆ.

- Advertisement -

ಹುಬ್ಬಳ್ಳಿ ಧಾರವಾಡ ಪಾಲಿಕೆ ಕ್ರಮ ಪ್ರಶ್ನಿಸಿ ಹುಸೇನ್ ಎಂಬವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಈ ವಿಚಾರವಾಗಿ ವಾದ ಮಂಡಿಸಿದ ಸರ್ಕಾರಿ ವಕೀಲ ಎಸ್.ಎಸ್.ಮಹೇಂದ್ರ, ರಾಣಿ ಚೆನ್ನಮ್ಮ ಹೆಸರಿಡುವ ಬಗ್ಗೆ ಸಾರ್ವಜನಿಕರ ಆಕ್ಷೇಪಣೆ ಕೋರಲಾಗಿದೆ. ಆಕ್ಷೇಪಣೆ ಸ್ವೀಕರಿಸಿದ ಬಳಿಕವೇ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ನ್ಯಾಯಾಲಯಕ್ಕೆ ತಿಳಿಸಿದರು.

ಸರ್ಕಾರಿ ವಕೀಲರ ವಾದ ಆಲಿಸಿದ ವಿಭಾಗೀಯ ಪೀಠ, ಪಿಐಎಲ್ ಅರ್ಜಿಯನ್ನು ತಿರಸ್ಕರಿಸಿತು. ಈದ್ಗಾ ಮೈದಾನಕ್ಕೆ ಸ್ವಾತಂತ್ರ್ಯ ಹೋರಾಟಗಾರ್ತಿ ಕಿತ್ತೂರು ರಾಣಿ ಚೆನ್ನಮ್ಮ ಅವರ ಹೆಸರನ್ನು ಇಡುವ ಬಗ್ಗೆ ಇತ್ತೀಚೆಗೆ ನಡೆದ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಚರ್ಚೆಯಾಗಿತ್ತು. ನಂತರ ಆ ಕುರಿತು ಪ್ರಕಟಣೆ ಹೊರಡಿಸಿದ್ದ ಪಾಲಿಕೆ 30 ದಿನಗಳ ಒಳಗಾಗಿ ತಕರಾರರು ಅರ್ಜಿ ಸಲ್ಲಿಸುವಂತೆ ಸಾರ್ವಜನಿಕರಿಗೆ ಸೂಚಿಸಿತ್ತು.



Join Whatsapp