ಕರ್ನಾಟಕ ಹೈಕೋರ್ಟ್ ತೀರ್ಪು ನಿರಾಶಾದಾಯಕ: ಉಮರ್ ಅಬ್ದುಲ್ಲಾ, ಮುಫ್ತಿ

Prasthutha|

ನವದೆಹಲಿ: ವಿದ್ಯಾರ್ಥಿಗಳಿಗೆ ತರಗತಿಯಲ್ಲಿ ಹಿಜಾಬ್ ಧರಿಸಲು ಅವಕಾಶ ನಿರಾಕರಿಸಿರುವ ಕರ್ನಾಟಕ ಹೈಕೋರ್ಟ್ ತೀರ್ಪಿಗೆ ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿಗಳಾದ ಪಿಡಿಪಿಯ ಮೆಹಬೂಬಾ ಮುಫ್ತಿ ಮತ್ತು ನ್ಯಾಶನಲ್ ಕಾನ್ಫರೆನ್ಸ್ ನ ಉಮರ್ ಅಬ್ದುಲ್ಲಾ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

- Advertisement -

ಕರ್ನಾಟಕ ಉಚ್ಚ ನ್ಯಾಯಾಲಯದ ತೀರ್ಪು ನಿರಾಶಾದಾಯಕ ಎಂದು ಅವರು ಟ್ವೀಟ್ ನಲ್ಲಿ ಪ್ರತಿಕ್ರಿಯಿಸಿದ್ದಾರೆ.

ಹಿಜಾಬ್ ಧರಿಸಲು ಅವಕಾಶ ಕೋರಿ ಸಲ್ಲಿಸಿದ್ದ ಅರ್ಜಿಗಳನ್ನು ವಜಾಗೊಳಿಸಿ, ಹಿಜಾಬ್ ಇಸ್ಲಾಮಿನ ಅತ್ಯಗತ್ಯ ಭಾಗವಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಂಗಳವಾರ ತೀರ್ಪು ನೀಡಿದೆ.



Join Whatsapp