ಹಿಜಾಬ್ ವಿಚಾರ: ಪ್ರತಿಭಟನಾ ನಿರತ ವಿದ್ಯಾರ್ಥಿಗಳ ವಿರುದ್ಧ ಎಫ್.ಐ.ಆರ್

Prasthutha|

ಬೆಂಗಳೂರು: ಶಾಲಾ ಕಾಲೇಜುಗಳಲ್ಲಿ ಹಿಜಾಬ್ ವಿಚಾರಕ್ಕೆ ಸಂಬಂಧಿಸಿದಂತೆ ಸತತ ಆರು ದಿನಗಳಿಂದ ಕರ್ನಾಟಕ ಹೈಕೋರ್ಟ್ ವಿಚಾರಣೆ ನಡೆಸುತ್ತಿರುವ ಮಧ್ಯೆ ಸಾಂವಿಧಾನಿಕ ಹಕ್ಕನ್ನು ತಡೆಯುತ್ತಿರುವ ನಡೆಯನ್ನು ವಿರೋಧಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನಾ ನಿರತರು ಕಾಲೇಜು ಸಿಬ್ಬಂದಿಗಳೊಂದಿಗೆ ವಾಗ್ವಾದ ಮತ್ತು ನಿಷೇಧಾಜ್ಞೆ ಉಲ್ಲಂಘಿಸಿದ್ದಕ್ಕಾಗಿ ವಿದ್ಯಾರ್ಥಿಗಳ ವಿರುದ್ಧ ತುಮಕೂರಿನಲ್ಲಿ ಪ್ರಕರಣ ದಾಖಲಿಸಲಾಗಿದೆ.

- Advertisement -

ತುಮಕೂರಿನ ಎಂಪ್ರೆಸ್ ಕಾಲೇಜಿನ ಪ್ರಾಂಶುಪಾಲರು, ಕಳೆದ ಎರಡು ದಿನಗಳಲ್ಲಿ ನಿಷೇಧಾಜ್ಞೆ ಉಲ್ಲಂಘಿಸಿದ ಕಾರಣಕ್ಕಾಗಿ 15 ರಿಂದ 20 ವಿದ್ಯಾರ್ಥಿಗಳ ವಿರುದ್ಧ ತುಮಕೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಿಜಾಬ್ ಧರಿಸಿ ತರಗತಿಗೆ ಹಾಜರಾಗುವ ಹಕ್ಕು ನೀಡುವಂತೆ ಒತ್ತಾಯಿಸಿ ವಿದ್ಯಾರ್ಥಿಗಳು ಕಾಲೇಜು ಆವರಣದಲ್ಲಿ ಪ್ರತಿಭಟನೆ ನಡೆಸಿದ್ದರು.
ಹಿಜಾಬ್ ಧರಿಸಿ ತರಗತಿಗೆ ಹಾಜರಾಗಲು ಅನುಮತಿ ನೀಡುವಂತೆ ಅಧಿಕಾರಿಗಳಲ್ಲಿ ಮನವಿ ಮಾಡಿ ಪ್ರತಿಭಟಿಸಿದ ವಿದ್ಯಾರ್ಥಿಗಳ ವಿರುದ್ಧ ಮೊದಲ ಪ್ರಕರಣ ದಾಖಲಾಗಿದೆ.

ವಿದ್ಯಾರ್ಥಿಗಳ ಬಗ್ಗೆ ಮೃದು ಧೋರಣೆ ತೋರದೆ ಕಠಿಣ ಕ್ರಮ ಜರುಗಿಸಲಾಗುವುದೆಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಈ ಹಿಂದೆ ಹೇಳಿಕೆ ನೀಡಿದ್ದು, ಮಧ್ಯಂತರ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಕೈಗೊಳ್ಳುವಂತೆ ಸೂಚಿಸಿದ್ದರು.

- Advertisement -

ಮತ್ತೊಂದು ಘಟನೆಯಲ್ಲಿ ವಿಜಯಪುರ ಜಿಲ್ಲೆಯ ಇಂಡಿ ಕಾಲೇಜಿನ ಪ್ರಾಂಶುಪಾಲರು ಹಿಂದೂ ವಿದ್ಯಾರ್ಥಿಗಳನ್ನು ‘ ಸಿಂಧೂರ’ ಧರಿಸಿದ್ದಕ್ಕಾಗಿ ಮನೆಗೆ ವಾಪಸ್ಸು ಕಳುಹಿಸಿದ್ದರು. ಈ ಸಂಬಂಧ ವಿದ್ಯಾರ್ಥಿಯ ಪೋಷಕರು ಪ್ರಾಂಶುಪಾಲರನ್ನು ಪ್ರಶ್ನಿಸಿದರಲ್ಲದೆ, ಮೂಲ ಸಂಪ್ರದಾಯವನ್ನು ಪ್ರಶ್ನಿಸಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.

ಈ ನಡುವೆ ಸಿಂಧೂರ ಹಾಕಿದ ಕಾರಣಕ್ಕೆ ಹಿಂದೂ ವಿದ್ಯಾರ್ಥಿನಿಯನ್ನು ಮನೆಗೆ ಕಳುಹಿಸಿದ ಪ್ರಾಂಶುಪಾಲರನ್ನು ಅಮಾನತುಗೊಳಿಸುವಂತೆ ಶ್ರೀರಾಮ್ ಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಆಗ್ರಹಿಸಿದ್ದಾರೆ.

Join Whatsapp