Home ಟಾಪ್ ಸುದ್ದಿಗಳು ಕರ್ನಾಟಕ ಭೂ ಕಂದಾಯ ತಿದ್ದುಪಡಿ ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಭೂ ಕಂದಾಯ ತಿದ್ದುಪಡಿ ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರ

ಬೆಂಗಳೂರು: ಈ ಬಾರಿಯ ಮುಂಗಾರು ಅಧಿವೇಶನದ ಮೊದಲ ವಾರದ ಕಲಾಪ ಫಲಪ್ರದವಾಗಿ ನಡೆದಿದ್ದು, ವಿಧಾನಸಭೆಯಲ್ಲಿ 2022ನೇ ಸಾಲಿನ ಕರ್ನಾಟಕ ಭೂ ಕಂದಾಯ ತಿದ್ದುಪಡಿ ವಿಧೇಯಕ ಸೇರಿದಂತೆ ಎರಡು ವಿಧೇಯಕಗಳಿಗೆ ಅಂಗೀಕಾರ ದೊರೆತಿದೆ.

ಅನಧಿಕೃತ ಸಾಗುವಳಿ ಭೂಮಿಗಳನ್ನು ಸಕ್ರಮಗೊಳಿಸಲು ನಮೂನೆ-53ರಲ್ಲಿ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಒಂದು ವರ್ಷಕ್ಕೆ ವಿಸ್ತರಿಸಲು ಕರ್ನಾಟಕ ಭೂ ಕಂದಾಯ ತಿದ್ದುಪಡಿ ವಿಧೇಯಕದಲ್ಲಿ ಪ್ರಸ್ತಾಪಿಸಲಾಗಿದೆ. ಸುಗ್ರೀವಾಜ್ಞೆ ಮೂಲಕ ಜಾರಿಯಾದ ಕಾಯ್ದೆಯನ್ನು ವಿಧೇಯಕ ರೂಪದಲ್ಲಿ ಮಂಡಿಸಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ ಹೇಳಿದರು.

ಸುದೀರ್ಘ ಚರ್ಚೆ ನಂತರ ಧ್ವನಿಮತದೊಂದಿಗೆ ವಿಧೇಯಕಕ್ಕೆ ಅಂಗೀಕಾರ ದೊರೆಯಿತು. ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ಸಂರಕ್ಷಿಸುವ 2022ನೇ ಸಾಲಿನ ಕರ್ನಾಟಕ ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ಸಂರಕ್ಷಣೆ ತಿದ್ದುಪಡಿ ವಿಧೇಯಕಕ್ಕೆ ವಿಧಾನಸಭೆಯಲ್ಲಿ ಒಪ್ಪಿಗೆ ದೊರೆಯಿತು.

Join Whatsapp
Exit mobile version