ಕರ್ನಾಟಕ ವಿಧಾನ ಸಭೆ ಸಚಿವಾಲಯದಲ್ಲಿ ಸ್ಥಳೀಯ ವೃಂದದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶದವರಿಗಾಗಿ (ಹೈ.ಕ) ಗುರುತಿಸಲಾದ ವಿವಿಧ ವೃಂದಗಳ ಹುದ್ದೆಗಳನ್ನು ಹಾಗೂ ಮಾತೃ ವೃಂದದಲ್ಲಿನ ವಿವಿಧ ವೃಂದಗಳ ಹುದ್ದೆಗಳನ್ನು ನೇರ ನೇಮಕಾತಿಯ ಮೂಲಕ ಭರ್ತಿ ಮಾಡಲು ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಈ ಸರ್ಕಾರಿ ಹುದ್ದೆಗಳಲ್ಲಿ ಆಸಕ್ತಿ ಇರುವವರು ನವೆಂಬರ್ 25 ರೊಳಗೆ ಆಫ್ ಲೈನ್ ಮಾದರಿಯಲ್ಲಿ ಅರ್ಜಿ ಸಲ್ಲಿಸಿ.
ವರದಿಗಾರರು, ಜೂನಿಯರ್ ಪ್ರೋಗ್ರಾಮರ್, ಕಂಪ್ಯೂಟರ್ ಆಪರೇಟರ್, ದಲಾಯತ್, ಸ್ವೀಪರ್, ಮಾಸಜರ್, ಸೇರಿದಂತೆ ವಿವಿಧ ಹುದ್ದೆಗಳಿವೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವವರು ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಿ.
ಅರ್ಜಿ ಸಲ್ಲಿಸಲು ವಯಸ್ಸಿನ ಅರ್ಹತೆಗಳು
• ಅರ್ಜಿ ಸ್ವೀಕರಿಸಲು ನಿಗದಿತ ಕೊನೆ ದಿನಾಂಕಕ್ಕೆ ಕನಿಷ್ಠ 18 ವರ್ಷ ಆಗಿರಬೇಕು. ಗರಿಷ್ಠ ವಯಸ್ಸಿನ ಮಿತಿಯನ್ನು ವರ್ಗಾವಾರು ಕೆಳಗಿನಂತೆ ತಿಳಿಸಲಾಗಿದೆ.
• ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ 35 ವರ್ಷ.
• ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 38 ವರ್ಷ.
• ಎಸ್ ಸಿ / ಎಸ್ ಟಿ / ಪ್ರವರ್ಗ-1 ಅಭ್ಯರ್ಥಿಗಳಿಗೆ 41 ವರ್ಷ ವಯಸ್ಸು ದಾಟಿರಬಾರದು.
• ಅರ್ಜಿ ಶುಲ್ಕ ರೂ.500.
ಅರ್ಜಿ ಸಲ್ಲಿಸಬೇಕಾದ ವಿಳಾಸ- ಕಾರ್ಯದರ್ಶಿ, ಕರ್ನಾಟಕ ವಿಧಾನ ಸಭೆ ಸಚಿವಾಲಯ, ಅಂಚೆ ಪೆಟ್ಟಿಗೆ ಸಂಖ್ಯೆ 5074, ಮೊದಲನೇ ಮಹಡಿ, ವಿಧಾನ ಸೌಧ, ಬೆಂಗಳೂರು-560 001.