ಇಂದಿನಿಂದ ಕರ್ನಾಟಕ ವಿಧಾನಮಂಡಲ ಅಧಿವೇಶನ

Prasthutha|

ಬೆಂಗಳೂರು: ಇಂದಿನಿಂದ ಕರ್ನಾಟಕ ವಿಧಾನಮಂಡಲ ಅಧಿವೇಶನ ಆರಂಭವಾಗಲಿದೆ. ಹಗರಣಗಳ ಬಗ್ಗೆ ಪ್ರಸ್ತಾಪಿಸಲು ವಿಪಕ್ಷಗಳಾದ ಬಿಜೆಪಿ-ಜೆಡಿಎಸ್ ನಿರ್ಧರಿಸಿವೆ.

- Advertisement -

ನಿನ್ನೆ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನ ಮಂಡಲ ಅಧಿವೇಶನಕ್ಕೆ ಪೂರ್ವಭಾವಿಯಾಗಿ ಎಲ್ಲ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳ ಸಭೆ ನಡೆಸಿ ವಿವಿಧ ವಿಷಯಗಳ ಕುರಿತು ಚರ್ಚಿಸಿದ್ದಾರೆ.

ವಿವಿಧ ಇಲಾಖೆಗಳಲ್ಲಿ ಚರ್ಚೆಗೆ ಬರುವ ಸಾಧ್ಯತೆ ಇರುವ ವಿಷಯಗಳ ಕುರಿತು ಇಲಾಖಾ ಕಾರ್ಯದರ್ಶಿಗಳಿಂದ ಮುಖ್ಯಮಂತ್ರಿಗಳು ಸವಿಸ್ತಾರವಾಗಿ ಮಾಹಿತಿ ಪಡೆದರು. ಚರ್ಚೆಯ ಸಾಧ್ಯತೆ ಇರುವ ವಿಷಯಗಳ ಕುರಿತು ದತ್ತಾಂಶಗಳನ್ನು ಸಂಗ್ರಹಿಸಲು ಸಹ ಸೂಚನೆ ನೀಡಿದ್ದಾರೆ.

- Advertisement -

ಎಲ್ಲ ಕಾರ್ಯದರ್ಶಿಗಳೂ, ಇಲಾಖಾ ಮುಖ್ಯಸ್ಥರು ಅಧಿವೇಶನದಲ್ಲಿ ಹಾಜರಿರಬೇಕು. ಸಚಿವರಿಗೆ ಸಮರ್ಪಕವಾಗಿ ಮಾಹಿತಿ ನೀಡಬೇಕು. ಆಯಾ ಇಲಾಖಾ ಸಚಿವರು ಚರ್ಚೆಯ ವಿಷಯಗಳಿಗೆ ಉತ್ತರಿಸಬೇಕು. ಅಗತ್ಯವಿದ್ದರೆ ನಾನು ಮಧ್ಯಪ್ರವೇಶಿಸುತ್ತೇನೆ. ನಿಮ್ಮ ಇಲಾಖೆಯ ವಿಷಯ ಇದ್ದಾಗ ಕಾರ್ಯದರ್ಶಿಗಳು ಖುದ್ದು ಹಾಜರಿದ್ದು, ಸಚಿವರಿಗೆ ಸಹಕಾರ ನೀಡಬೇಕು. ಕೇವಲ ಅಧೀನ ಅಧಿಕಾರಿಗಳನ್ನು ಕಳುಹಿಸಿ ಗೈರು ಹಾಜರಾಗುವಂತಿಲ್ಲ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.



Join Whatsapp