ಕರ್ನಾಟಕ ಮಹಾರಾಷ್ಟ್ರ ಗಡಿ ವಿವಾದ । ಬಸ್ ಸಂಚಾರ ಬಂದ್

Prasthutha|

ಕರ್ನಾಟಕ ಮಹಾರಾಷ್ಟ್ರ ಗಡಿ ವಿವಾದದ ಹಿನ್ನಲೆಯಲ್ಲಿ ಗಡಿಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಬಸ್ ಸೇವೆಯನ್ನು ತಾತ್ಕಾಲಿಕವಾಗಿ ನಿಲ್ಲಿಸಿದೆ ಎಂದು ತಿಳಿದು ಬಂದಿದೆ. ಶಿವಸೇನೆ ಮುಖಂಡ ಸಂಜಯ್ ರೌತ್ ಕರ್ನಾಟಕದ ಬೆಳಗಾವಿಯಲ್ಲಿ ವಾಸಿಸುವ ಮರಾಠಿ ಜನರು ಹಲ್ಲೆಗೊಳಗಾಗುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಮಹಾರಾಷ್ಟ್ರದ ಸರ್ವಪಕ್ಷಗಳ ನಿಯೋಗವು ನೆರೆಯ ರಾಜ್ಯದ ನಗರಕ್ಕೆ ಭೇಟಿ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಈ ಮಧ್ಯೆ ಗಡಿ ಸಮಸ್ಯೆ ಉಲ್ಭಣಿಸಿರುವಂತೆಯೇ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಶನಿವಾರ ಮಹಾರಾಷ್ಟ್ರದ ಕೊಲ್ಹಾಪುರಕ್ಕೆ ಇರುವ ತನ್ನ ಎಲ್ಲಾ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ.

- Advertisement -

ಕೆಲವು ಮಹಾರಾಷ್ಟ್ರ ನಾಯಕರು ಕರ್ನಾಟಕದಲ್ಲಿ ಮರಾಠಿ ಮಾತನಾಡುವ ಜನರು ಪ್ರಾಬಲ್ಯ ಹೊಂದಿರುವ ಪ್ರದೇಶಗಳನ್ನು, ವಿಶೇಷವಾಗಿ ಬೆಳಗಾವಿಯನ್ನು ವಿಲೀನಗೊಳಿಸುವಂತೆ ಒತ್ತಾಯಿಸುತ್ತಿದ್ದಾರೆ. ಇದನ್ನು ಕನ್ನಡ ಪರ ಸಂಘಟನೆಗಳು ವಿರೋಧಿಸುತ್ತಿವೆ. ಈ ವಿವಾದದಲ್ಲಿ ಬಸ್ಸ್ ಗಳಿಗೆ ಮಸಿ ಬಳಿಯುವುದು ಮತ್ತು ಕಲ್ಲೆಸೆತ ಕಂಡುಬಂದಿದ್ದು ತಾತ್ಕಾಲಿಕವಾಗಿ ಎಲ್ಲಾ ಸಾರಿಗೆ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಮಾಧ್ಯಮದೊಂದಿಗೆ ಹೇಳಿದ್ದಾರೆ.

Join Whatsapp