ಗಡಿ ವಿವಾದ| ಸುಪ್ರೀಂ ಕೋರ್ಟ್‌ನಲ್ಲಿ ಇಂದು ವಿಚಾರಣೆ

Prasthutha|

ಹೊಸದಿಲ್ಲಿ: ಕರ್ನಾಟಕ–ಮಹಾರಾಷ್ಟ್ರ ಗಡಿ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ನಲ್ಲಿ ಇಂದು ವಿಚಾರಣೆ ನಡೆಯಲಿದೆ.

ನ್ಯಾಯಮೂರ್ತಿ ಕೆ.ಎಂ.ಜೋಸೆಫ್‌ ನೇತೃತ್ವದ ತ್ರಿಸದಸ್ಯ ಪೀಠವು ಬುಧವಾರ ಪ್ರಕರಣದ ವಿಚಾರಣೆ ನಡೆಸಲಿದ್ದು, ನ್ಯಾಯಾಲಯದಲ್ಲಿ ಸಮರ್ಥವಾಗಿ ವಾದ ಮಂಡಿಸಲು ಕರ್ನಾಟಕ ಸರ್ಕಾರ ಅಗತ್ಯ ಸಿದ್ಧತೆ ಮಾಡಿಕೊಂಡಿದೆ.

- Advertisement -

ಕರ್ನಾಟಕ ಸರ್ಕಾರವು ಹಿರಿಯ ವಕೀಲರಾದ ಮುಕುಲ್‌ ರೋಹಟಗಿ, ಶ್ಯಾಮ್‌ ದಿವಾನ್‌ ನೇತೃತ್ವದಲ್ಲಿ ವಕೀಲರ ತಂಡ ರಚಿಸಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮುಕುಲ್‌ ರೋಹಟಗಿ ಅವರನ್ನು ನವದೆಹಲಿಯಲ್ಲಿ ಮಂಗಳವಾರ ಭೇಟಿ ಮಾಡಿ ಕಾನೂನು ಹೋರಾಟದ ಕುರಿತು ಸಮಾಲೋಚನೆ ನಡೆಸಿದ್ದಾರೆ. ಈ ವೇಳೆ ರಾಜ್ಯ ಸರ್ಕಾರದ ಅಡ್ವೊಕೇಟ್‌ ಜನರಲ್‌ ಪ್ರಭುಲಿಂಗ ಕೆ.ನಾವದಗಿ ಜತೆಗಿದ್ದು, ಪೂರಕ ಮಾಹಿತಿ ನೀಡಿದರು.

ಬಳಿಕ ಸುದ್ದಿಗಾರರ ಜತೆಗೆ ಮಾತನಾಡಿದ ಬೊಮ್ಮಾಯಿ, ‘ಮುಕುಲ್ ರೋಹಟಗಿ ಅವರು ಕರ್ನಾಟಕದ ಪರವಾಗಿ ಸಮರ್ಥವಾಗಿ ವಾದ ಮಾಡುವ ಭರವಸೆ ಇದೆ. ಗಡಿ ವಿವಾದದ ಎಲ್ಲ ಆಯಾಮಗಳನ್ನು ರೋಹಟಗಿ ಅವರಿಗೆ ನಮ್ಮ ಅಡ್ವೊಕೇಟ್ ಜನರಲ್‌ ವಿವರಿಸಿದ್ದಾರೆ. ನಾನು ಗಡಿ ವಿವಾದದ ಕಾನೂನಾತ್ಮಕ ಹಿನ್ನೆಲೆ ಕುರಿತು ರೋಹಟಗಿ ಅವರಿಗೆ ವಿವರಣೆ ನೀಡಿದ್ದೇನೆ. ಸುಪ್ರೀಂ ಕೋರ್ಟ್‌ನಲ್ಲಿ ಸಮರ್ಥ ವಾದ ಮಂಡಿಸಲು ಎಲ್ಲ ರೀತಿಯ ಸಿದ್ಧತೆ ನಡೆದಿದೆ’ ಎಂದು ಅವರು ಹೇಳಿದರು.

- Advertisement -