ಕರ್ನಾಟಕ ಬಿಜೆಪಿ ನಾಯಕರ ದುರಾವಸ್ಥೆ ನೋಡಿ ಕರುಣೆ ಹುಟ್ಟುತ್ತಿದೆ: ಸಚಿವ ಪ್ರಿಯಾಂಕ್ ಖರ್ಗೆ ವ್ಯಂಗ್ಯ

Prasthutha|

ಬೆಂಗಳೂರು: ಇಸ್ರೊ ವಿಜ್ಞಾನಿಗಳನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಲು ಬಂದ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಘಟದ ಅಧ್ಯಕ್ಷ ನಳಿನ್ ಕುಮಾರ ಕಟೀಲ್ ಸೇರಿದಂತೆ ಬಿಜೆಪಿ ನಾಯಕರು ಬಂದೋಬಸ್ತಿಗೆಂದು ಹಾಕಲಾಗಿದ್ದ ಬ್ಯಾರಿಕೇಡ್ ಒಳಗಿನಿಂದಲೇ ಮೋದಿ ಗಮನ ಸೆಳೆಯಲು ಪ್ರಯತ್ನಿಸುತ್ತಿರುವ ಸನ್ನಿವೇಶವನ್ನು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ವ್ಯಂಗ್ಯವಾಡಿದ್ದಾರೆ.

- Advertisement -


ಕರ್ನಾಟಕ ಬಿಜೆಪಿ ನಾಯಕರ ದುರಾವಸ್ಥೆ ನೋಡಿ ಕರುಣೆ ಹುಟ್ಟುತ್ತಿದೆ ಎಂದು ಹೇಳಿದ್ದಾರೆ.


ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಿಯಾಂಕ್ ಖರ್ಗೆ, ಪ್ರಧಾನಿ ಮುಂದೆ ಬ್ಯಾರಿಕೇಡ್ ಬಂಧಿಗಳಾಗಿ ಗಮನ ಸೆಳೆಯಲು ಹರಸಾಹಸ ಮಾಡುತ್ತಿರುವ ಬಿಜೆಪಿ ನಾಯಕರು ಸ್ವಾಭಿಮಾನ, ಆತ್ಮಗೌರವವನ್ನು ಬೀದಿಪಾಲು ಮಾಡಿಕೊಂಡಿದ್ದು ಕರುಣಾಜನಕವಾಗಿದೆ ಎಂದಿದ್ದಾರೆ.

- Advertisement -


ರಾಜಕೀಯವಾಗಿ, ಸೈದ್ದಾಂತಿಕವಾಗಿ ವಿರೋಧಿಗಳಾಗಿದ್ದರೂ ಕರ್ನಾಟಕ ಬಿಜೆಪಿ ನಾಯಕರ ದುರಾವಸ್ಥೆ ನೋಡಿ ಕರುಣೆ ಹುಟ್ಟುತ್ತಿದೆ! ಎಂದೂ ವ್ಯಂಗ್ಯವಾಡಿದ್ದಾರೆ.
ನೂರು ದಿನಗಳಾದರೂ ಕೂಡಾ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡದ ಬಿಜೆಪಿಯನ್ನು ಟೀಕಿಸಿರುವ ಅವರು ಹೈಕಮಾಂಡ್ ನಿಂದ ಇಷ್ಟೊಂದು ತಿರಸ್ಕಾರಕ್ಕೆ ಒಳಪಟ್ಟಿರುವಾಗ ‘ವಿರೋಧ ಪಕ್ಷದ ನಾಯಕ’ನ ಆಯ್ಕೆ ಸಾಧ್ಯವಾಗುವುದೇ? ಈಗ ಸ್ವತಃ ಬಿಜೆಪಿಗರೂ ಸರ್ವಾಧಿಕಾರದ ಸಂತ್ರಸ್ತರಾಗಿದ್ದಾರೆ” ಎಂದಿದ್ದಾರೆ.
‘ಬೀದಿಯಲ್ಲಿ ನಿಂತ ಬಿಜೆಪಿ ನಾಯಕರು ತಮ್ಮನ್ನು ತಾವೇ ಅವಮಾನಿಸಿಕೊಂಡಿದ್ದು, ಇದು ಮತ ನೀಡಿದ ಮತದಾರರಿಗೆ ಅವಮಾನ, ಕನ್ನಡಿಗರಿಗೆ ಅವಮಾನ, ಕಾರ್ಯಕರ್ತರಿಗೆ ಅವಮಾನ ‘ ಎಂದು ಹೇಳಿದ್ದಾರೆ.



Join Whatsapp