Home ಟಾಪ್ ಸುದ್ದಿಗಳು ರಷ್ಯಾದ ಸೇನೆಯಲ್ಲಿ ಕರ್ನಾಟಕದ ಮೂವರು: ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದೇನು?

ರಷ್ಯಾದ ಸೇನೆಯಲ್ಲಿ ಕರ್ನಾಟಕದ ಮೂವರು: ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದೇನು?

ಬೆಂಗಳೂರು: ಉದ್ಯೋಗಕ್ಕಾಗಿ ರಷ್ಯಾಕ್ಕೆ ತೆರಳಿದ್ದ ಕರ್ನಾಟಕದ ಮೂವರನ್ನು ಯುದ್ಧಕ್ಕೆ ಬಳಸಿಕೊಂಡ ಆರೋಪ ಕೇಳಿಬಂದಿದೆ. ಈ ಬಗ್ಗೆ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ , ನಮ್ಮ ಜಿಲ್ಲಾಧಿಕಾರಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಕಲಬುರಗಿ ಜಿಲ್ಲೆಯ ಮೂವರು ಯುವಕರು ರಷ್ಯಾಕ್ಕೆ ಹೋಗಿದ್ದ ಮಾಹಿತಿ ಇದೆ ಎಂದು ಹೇಳಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಪ್ರಿಯಾಂಕ್ ಖರ್ಗೆ, ರಷ್ಯಾ ಸೇನೆ ಅಮಾಯಕ ಯುವಕರನ್ನು ಯುದ್ಧಕ್ಕೆ ಬಳಸಿದ ಮಾಹಿತಿ ಇದೆ. ರಷ್ಯಾದಲ್ಲಿ ನಮ್ಮ ಯುವಕರನ್ನು ಸೇನೆಗೆ ಬಳಸಿಕೊಂಡ ಬಗ್ಗೆ ನಮ್ಮ ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಕಲಬುರಗಿ ಜಿಲ್ಲೆಯ ಮೂವರು ಯುವಕರು ರಷ್ಯಾಕ್ಕೆ ಹೋಗಿದ್ದ ಮಾಹಿತಿ ನೀಡಿದ್ದಾರೆ ಎಂದರು.


ರಷ್ಯಾದ ವ್ಯಾಗ್ನರ್ ಗ್ರೂಪ್ ಗೆ ಸೇರ್ಪಡೆ ಮಾಡಿಕೊಂಡ ಮಾಹಿತಿ ಇದೆ. ವಿದೇಶಾಂಗ ಸಚಿವರ ಬಳಿ ಮಾತನಾಡುವಂತೆ ಮಲ್ಲಿಕಾರ್ಜುನ ಖರ್ಗೆ ಅವರಲ್ಲಿ ಮನವಿ ಮಾಡಿದ್ದಾನೆ. ಅವರು ಕೂಡ ಪತ್ರ ಬರೆಯುವುದಾಗಿ ತಿಳಿಸಿದ್ದಾರೆ. ಉತ್ತರ ಭಾರತದಲ್ಲಿ ಇಂಥದ್ದು ಜಾಸ್ತಿ ಆಗಿದೆ. ಕೇಂದ್ರ ಸರ್ಕಾರ ಅವರನ್ನ ರಕ್ಷಣೆ ಮಾಡಬೇಕಿದೆ ಎಂದರು.

Join Whatsapp
Exit mobile version