ಬೆಂಗಳೂರು: ಇಪ್ಪತ್ತು ಸ್ಥಳೀಯ ಸಂಸ್ಥೆಗಳ ಕ್ಷೇತ್ರಗಳಿಂದ ವಿಧಾನ ಪರಿಷತ್‌ನ 25 ಸ್ಥಾನಗಳಿಗೆ ನಾಳೆ (ಶುಕ್ರವಾರ) ಬೆಳಿಗ್ಗೆ 8ರಿಂದ ಸಂಜೆ 4ರವರೆಗೆ ಮತದಾನ ನಡೆಯಲಿದೆ. ಒಟ್ಟು 90 ಅಭ್ಯರ್ಥಿಗಳು ಕಣದಲ್ಲಿದ್ದಾರೆ.
ಡಿಸೆಂಬರ್ 14ರಂದು ಫಲಿತಾಂಶ ಹೊರ ಬರಲಿದೆ. ಬುಧವಾರ ಸಂಜೆ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದೆ.
ನವೆಂಬರ್ 16ರಿಂದ ಚುನಾವಣಾ ಪ್ರಕ್ರಿಯೆ ಆರಂಭವಾಗಿದೆ. ಬಿಜೆಪಿ ಮತ್ತು ಕಾಂಗ್ರೆಸ್ ತಲಾ 20 ಕ್ಷೇತ್ರಗಳಲ್ಲಿ ಪೈಪೋಟಿಯಲ್ಲಿವೆ. ಜೆಡಿಎಸ್ ಆರು ಕ್ಷೇತ್ರಗಳಲ್ಲಿ ಹಾಗೂ ದ.ಕ ಮತ್ತು ಉಡುಪಿ ವಿಧಾನ ಪರಿಷತ್ ಕ್ಷೇತ್ರದಲ್ಲಿ SDPI ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ. 33 ಪಕ್ಷೇತರರು ಸ್ಪರ್ಧೆಯಲ್ಲಿದ್ದಾರೆ.
ರಾಜ್ಯದಲ್ಲಿ 6,072 ಮತಗಟ್ಟೆಗಳಿದ್ದು, 23,065 ಮತಗಟ್ಟೆ ಅಧಿಕಾರಿಗಳನ್ನು ನಿಯೋಜಿಸಲಾಗಿದೆ.