ನೆರೆ ರಾಜ್ಯಗಳಿಗಿಂತ ಕರ್ನಾಟಕದಲ್ಲೇ ತೈಲ ದರ ಕಡಿಮೆ: ಸಿಎಂ ಸಿದ್ದರಾಮಯ್ಯ

Prasthutha|

- Advertisement -

ವಿಜಯಪುರ: ರಾಜ್ಯದಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಹಿನ್ನೆಲೆ ಸಾರ್ವಜನಿಕರು ಕಂಗಾಲಾಗಿದ್ದು, ಸರ್ಕಾರದ ನಡೆಗೆ ಆಕ್ರೋಶ ವ್ಯಕ್ತವಾಗಿದೆ.

ಈ ಕುರಿತು ವಿಜಯಪುರದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ‘ವ್ಯಾಟ್ ಹೆಚ್ಚಳ ಬಳಿಕ ದಕ್ಷಿಣ ಭಾರತದ ರಾಜ್ಯಗಳಿಗಿಂತ ಕರ್ನಾಟಕದಲ್ಲೇ ಪೆಟ್ರೋಲ್-ಡೀಸೆಲ್ ದರ ಕಡಿಮೆ ಇದೆ. ಮಹಾರಾಷ್ಟ್ರ, ಗುಜರಾತ್ ಮತ್ತು ಮಧ್ಯಪ್ರದೇಶಕ್ಕಿಂತಲೂ ನಮ್ಮಲ್ಲಿ ಡೀಸೆಲ್ ದರ ಕಡಿಮೆಯಿದೆ ಎಂದರು.

- Advertisement -

ನಮ್ಮ ರಾಜ್ಯದ ಸಂಪನ್ಮೂಲವನ್ನ ಬಿಜೆಪಿ ಸರ್ಕಾರ ಇದ್ದಾಗ ಬೇರೆ ರಾಜ್ಯಕ್ಕೆ ನೀಡಿತ್ತು. ರಾಜ್ಯ ಬಿಜೆಪಿ ಸರ್ಕಾರ ತೈಲ ವ್ಯಾಟ್​ ಕಡಿಮೆ ಮಾಡಿತ್ತು. ಕೇಂದ್ರ ಸರ್ಕಾರ ಪದೇಪದೆ ವ್ಯಾಟ್ ಹೆಚ್ಚಳ ಮಾಡಿತ್ತು. ಇದರಿಂದ ನಮ್ಮ ರಾಜ್ಯದ ಆದಾಯ ಕುಂಠಿತವಾಗಿತ್ತು. ಆದರೆ, ಕೇಂದ್ರದ ಬಿಜೆಪಿ ಸರ್ಕಾರ ಕನ್ನಡಿಗರನ್ನ ವಂಚಿಸಿ, ಹೆಚ್ಚು ತೆರಿಗೆ ಸಂಗ್ರಹಿಸಿತ್ತು ಎಂದು ಸಿಎಂ ಆರೋಪಿಸಿದ್ದಾರೆ.

Join Whatsapp