ರಾಜ್ಯದಲ್ಲಿ ಚುನಾವಣಾಧಿಕಾರಿಗಳ ಭರ್ಜರಿ ಬೇಟೆ| ಒಂದು ವಾರದಲ್ಲಿ ವಶಪಡಿಸಿಕೊಂಡ ಸ್ವತ್ತುಗಳೆಷ್ಟು ಗೊತ್ತೇ?

Prasthutha|

ಬೆಂಗಳೂರು: ರಾಜ್ಯ ವಿಧಾನ ಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಳೆದ ಒಂದು ವಾರದ ಅವಧಿಯಲ್ಲಿ ಚುನಾವಣಾ ಅಧಿಕಾರಿಗಳು, ಪೊಲೀಸರು ಬರೋಬ್ಬರಿ 69.36 ಕೋಟಿ ರೂ. ಮೌಲ್ಯದ ನಗದು, ಉಡುಗೊರೆ ಸ್ವತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

- Advertisement -

ಚುನಾವಣಾ ನೀತಿ ಸಂಹಿತೆ ಜಾರಿಯಾದ ಬಳಿಕ, ಅಂದರೆ ಮಾರ್ಚ್ 29ರ ನಂತರ ಇಷ್ಟೊಂದು ಮೊತ್ತದ ನಗದು, ಉಡುಗೊರೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಕುರಿತು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಪತ್ರಿಕಾ ಪ್ರಕಟಣೆ ಮೂಲಕ ಮಾಹಿತಿ ನೀಡಿದೆ.

ಈವರೆಗೆ ವಶಪಡಿಸಿಕೊಂಡಿರುವುದರಲ್ಲಿ 22.75 ಕೋಟಿ ರೂ. ನಗದು, 12 ಕೋಟಿ ರೂ. ಮೌಲ್ಯದ ಉಡುಗೊರೆ ವಸ್ತುಗಳು ಸೇರಿವೆ. ನಗದು, ಇತರೆ ವಸ್ತುಗಳು, ಮದ್ಯ, ಮಾದಕ ದ್ರವ್ಯ ಸೇರಿದಂತೆ ಒಟ್ಟು 69,36,17,467 ರೂ. ಮೌಲ್ಯದ ವಸ್ತುಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಸುಮಾರು 526 ಎಫ್​ಐಆರ್​​ಗಳನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Join Whatsapp