ರಾಜ್ಯಸಭೆ ಚುನಾವಣೆಯಲ್ಲಿ ಬಿಜೆಪಿ 3, ಕಾಂಗ್ರೆಸ್ 1 ಸ್ಥಾನಗಳಲ್ಲಿ ಗೆಲವು ಸಾಧಿಸಿದ್ದು, ಜೆಡಿಎಸ್ ಖಾತೆ ತೆರೆಯುವಲ್ಲಿ ವಿಫಲಗೊಂಡಿದೆ.
ರಾಜ್ಯಸಭೆಗೆ ವಿಧಾನಸಭಾ ಸದಸ್ಯರ ಮೂಲಕ ನಡೆದ ಚುನಾವಣೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಮೂರು ಹಾಗೂ ಒಂದು ಸ್ಥಾನದಲ್ಲಿ ಗೆದ್ದು ನಗೆ ಬೀರಿದೆ.
ಬಿಜೆಪಿ ಪಕ್ಷದಿಂದ ಸ್ಪರ್ಧಿಸಿದ್ದ ನಿರ್ಮಲಾ ಸೀತಾರಾಮನ್, ಲೆಹರ್ ಸಿಂಗ್ ಹಾಗೂ ಜಗ್ಗೇಶ್ ಗೆಲುವು ಸಾಧಿಸಿದ್ದು, ಕಾಂಗ್ರೆಸ್ ಪಕ್ಷದಿಂದ ಜೈರಾಮ್ ರಮೇಶ್ ಗೆಲುವು ಸಾಧಿಸಿದ್ದಾರೆ. ನಾಲ್ಕನೇ ಸ್ಥಾನಕ್ಕೆ ಸ್ಪರ್ಧಿಸಿದ್ದ ಜೆಡಿಎಸ್ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಮನ್ಸೂರ್ ಅಲಿ ಖಾನ್‌ಗೆ ಹಿನ್ನಡೆ ಉಂಟಾಗಿದ್ದು ಸೋಲನುಭವಿಸಿದ್ದಾರೆ.