ಕೇಂದ್ರ ಸರ್ಕಾರ ವಿರುದ್ಧ ಹೋರಾಟಕ್ಕೆ ಸಜ್ಜಾದ ಕರ್ನಾಟಕ ರಕ್ಷಣಾ ವೇದಿಕೆ

Prasthutha|

ಹಾಸನ: ಅನುದಾನ ಹಂಚಿಕೆಯಲ್ಲಿ ಕೇಂದ್ರ ಸರ್ಕಾರದ ತಾರತಮ್ಯ ನೀತಿ ವಿಚಾರವಾಗಿ ಕರ್ನಾಟಕ ರಕ್ಷಣಾ ವೇದಿಕೆ ಪ್ರತಿಭಟನೆಗೆ ಸಜ್ಜಾಗುತ್ತಿರುವುದಾಗಿ ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಹೇಳಿದ್ದಾರೆ.

- Advertisement -


ಈ ಬಗ್ಗೆ ಮಾತನಾಡಿದ ಅವರು, ಕರ್ನಾಟಕ ರಕ್ಷಣಾ ವೇದಿಕೆ ಮುಂದೆ ಹೋರಾಟ ಮಾಡಲಿದೆ. ರಾಜ್ಯಕ್ಕೆ ಕೇಂದ್ರದಿಂದ ಬರಬೇಕಾದ ಅನುದಾನ, ನಮ್ಮ ತೆರಿಗೆ ನಮಗೆ ಕೊಡಿ ಎಂದು ದೊಡ್ಡ ಹೋರಾಟಕ್ಕೆ ಸಜ್ಜಾಗುತ್ತೇವೆ. ಕರ್ನಾಟಕ ಭಾರತದ ಒಕ್ಕೂಟದಲ್ಲಿ ಇದೇ ಅನ್ನುವುದನ್ನು ಕೇಂದ್ರ ಸರ್ಕಾರ ಮರೆಯಬಾರದು, ಯಾರೂ ಮರೆಯಬಾರದು ಎಂದು ಹೇಳಿದ್ದಾರೆ.


ನೀವು ತಾರತಮ್ಯ ಮಾಡಬೇಡಿ, ನಮ್ಮ ಹಣವನ್ನು ತೆಗೆದುಕೊಂಡು ಹೋಗಿ ಉತ್ತರ ಭಾರತದ ಯಾವುದೋ ರಾಜ್ಯಗಳಿಗೆ ಕೊಡುವ ಕೆಲಸ ಮಾಡಬೇಡಿ. ನಮಗೆ ಹೆಚ್ಚು ಅನುದಾನ ಕೊಡಬೇಕು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿಸುತ್ತೇವೆ ಎಂದಿದ್ದಾರೆ.



Join Whatsapp