Home ಟಾಪ್ ಸುದ್ದಿಗಳು ಎನ್.ಎಸ್.ಎಸ್ ಅಭಿವೃದ್ಧಿಯಲ್ಲಿ ಕರ್ನಾಟಕಕ್ಕೆ ದೇಶದಲ್ಲೇ ಒಂದನೇ ಸ್ಥಾನ: ಸಚಿವ ಕೆ.ಸಿ.ನಾರಾಯಣ ಗೌಡ

ಎನ್.ಎಸ್.ಎಸ್ ಅಭಿವೃದ್ಧಿಯಲ್ಲಿ ಕರ್ನಾಟಕಕ್ಕೆ ದೇಶದಲ್ಲೇ ಒಂದನೇ ಸ್ಥಾನ: ಸಚಿವ ಕೆ.ಸಿ.ನಾರಾಯಣ ಗೌಡ

ಬೆಂಗಳೂರು: ರಾಜ್ಯದಲ್ಲಿ 56 ವಿಶ್ವವಿದ್ಯಾಲಯ ಕಾಲೇಜು ಹಾಗೂ 4 ನಿರ್ದೇಶನಾಲಯಗಳಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಅನುಷ್ಠಾನಗೊಳ್ಳುತ್ತಿದೆ. ರಾಜ್ಯದಲ್ಲಿ 5 ಲಕ್ಷ ಸ್ವಯಂ ಸೇವಕ/ಸೇವಕಿಯರು ನೋಂದಾಯಿಸಿಕೊಂಡಿದ್ದಾರೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಚಿವ ಡಾ. ಕೆ. ಸಿ ನಾರಾಯಣಗೌಡ ಹೇಳಿದರು.


ಅವರು ಇಂದು ವಿಕಾಸೌಧದ ಸಭಾಂಗಣದಲ್ಲಿ ಕರ್ನಾಟಕ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಷ್ಟ್ರೀಯ ಸೇವಾ ಯೋಜನಾ ಕೋಶ ಬೆಂಗಳೂರು ಇವರ ವತಿಯಿಂದ ಆಯೋಜಿಸಿದ್ದ ಸಲಹಾ ಸಮಿತಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. 2021-22ರ ರಾಷ್ಟ್ರೀಯ ಸೇವಾ ಯೋಜನೆಯ ಚಟುವಟಿಕೆಗಳ ಕುರಿತು 2022-23 ರ ಸಲಹಾ ಸಮಿತಿಯಲ್ಲಿ ಗಾಂಧೀಜಿಯವರ ತತ್ವಗಳನ್ನು ಪಾಲಿಸುತ್ತಾ ಎನ್.ಎಸ್.ಎಸ್ ಅಭಿವೃದ್ಧಿಯಲ್ಲಿ ಕರ್ನಾಟಕವು ಭಾರತದಲ್ಲೇ ಒಂದನೇ ಸ್ಥಾನಕ್ಕೆ ತಲುಪಿದೆ. ಎನ್.ಎಸ್.ಎಸ್ ಇನ್ನಷ್ಟು ಸೇವೆಗಳ ಮೂಲಕ ಅಭಿವೃದ್ಧಿಯತ್ತ ಸಾಗಲಿ.” ಎಂದು ಸಚಿವರು ಆಶಿಸಿದರು.


ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳಾದ ಡಾ. ಶಾಲಿನಿ ರಜನೀಶ್ ಅವರು ಮಾತನಾಡಿ,”ಸಮಾಜದ ಅಗತ್ಯತೆಗಳನ್ನು ಗರುತಿಸಿ, ಜೀವನ ಕೌಶಲ್ಯಗಳ ತರಬೇತಿಯನ್ನು ನೀಡುವುದು ಅತ್ಯಗತ್ಯ”. ಎಂದರು.
ಕಾನೂನು ನೆರವಿನ ಕುರಿತು ಮಾತನಾಡಿ, “ಜನರಲ್ಲಿ ಕಾನೂನು ನೆರವಿನ ಕುರಿತು ಇನ್ನಷ್ಟು ಹೆಚ್ಚು ಜಾಗೃತಿ ಮೂಡಿಸಬೇಕು. ʼಕಾನೂನು ನೆರವಿನʼ ಬಗ್ಗೆಯು ಎನ್.ಎಸ್.ಎಸ್ ವಿದ್ಯಾರ್ಥಿಗಳ ಸಹಾಯದಿಂದ ಜಾಗೃತಿ ಮೂಡಿಸಬಹುದು. ಈ ಮೂಲಕ ನಮ್ಮ ಸಮಾಜದಲ್ಲಿ ಹೆಚ್ಚಿನ ಶಾಂತಿಯನ್ನು ಕಾಪಾಡಬಹುದು.” ಎಂದು ಹೇಳಿದರು.


ಸಭೆಯಲ್ಲಿ ರಾಜ್ಯ ಎನ್.ಎಸ್.ಎಸ್ ಅಧಿಕಾರಿಗಳಾದ ಪ್ರತಾಪ್ ಲಿಂಗಯ್ಯ, ಎನ್.ಎಸ್.ಎಸ್ ಪ್ರಾಂತೀಯ ಕೇಂದ್ರದ ನಿರ್ದೇಶಕರಾದ ಖಾದ್ರಿ ನರಸಿಂಹಯ್ಯ, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಯುಕ್ತರು ಗೋಪಾಲ್ ಕೃಷ್ಣ ವಿಭಾಗ ಮುಖ್ಯಸ್ಥರು ಮುಂತಾದವರು ಉಪಸ್ಥಿತರಿದ್ದರು.

Join Whatsapp
Exit mobile version