ಪುನೀತ್ ರಾಜ್ ಕುಮಾರ್ ಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ: ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ

Prasthutha|

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡುವುದಾಗಿ ಘೋಷಿಸಿದ್ದಾರೆ.

- Advertisement -

ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ನಡೆದ ‘ಪುನೀತ ನಮನ’ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳು ಘೋಷಣೆ ಮಾಡಿದ್ದಾರೆ.
ಇಂದು ಪುನೀತ್ ಅವರ ಸ್ಮರಣಾರ್ಥ ‘ಪುನೀತ ನಮನ’ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪುನೀತ್ ರಾಜ್ ಕುಮಾರ್ ಗೆ ಮರಣೋತ್ತರ ‘ಕರ್ನಾಟಕ ರತ್ನ’ಪ್ರಶಸ್ತಿ ನೀಡುವುದಾಗಿ ತಿಳಿಸಿದ್ದಾರೆ.


‘ಪುನೀತ್ ನಮ್ಮೆಲ್ಲರಿಗೂ ಆತ್ಮೀಯ. ಅವನನ್ನು ನಾನು ಬಾಲ್ಯದಿಂದ ಬಲ್ಲೆ. ಬಾಲ್ಯದಲ್ಲಿಯೇ ಪ್ರತಿಭೆಯ ಚಿಲುಮೆ ಹೊಂದಿದ ವ್ಯಕ್ತಿ. ಬಾಲ ನಟನಾಗಿ ರಾಷ್ಟ್ರ ಪ್ರಶಸ್ತಿ ಗಳಿಸಿದ ಕರ್ನಾಟಕದ ಏಕೈಕ ಬಾಲಕ ಪುನೀತ್. ಸಣ್ಣ ವಯಸ್ಸಿನಲ್ಲೇ ಆತ ಅದ್ಭುತವಾಗಿ ನಟಿಸುತ್ತಿದ್ದ. ಅಷ್ಟು ಸಣ್ಣ ವಯಸ್ಸಿನಲ್ಲಿ ಹಾಗೆ ನಟಿಸೋದು ಸುಲಭವಲ್ಲ’ ಎಂದು ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

- Advertisement -


ಪುನೀತ್ ಅವರನ್ನು ಕಂಠೀರವ ಸ್ಟುಡಿಯೋದಲ್ಲಿ ಅಂತಿಮ ಸಂಸ್ಕಾರ ಮಾಡಲಾಗಿದೆ. ಅಪ್ಪು ಅವರ ಹೆಸರನ್ನು ರಸ್ತೆಗೆ, ಪಾರ್ಕ್ ಗೆ ಇಡಲು ಅನೇಕ ಆಗ್ರಹ ಬಂದಿತ್ತು. ಇದೇ ಉದ್ದೇಶ ಸರ್ಕಾರದ್ದೂ ಹೌದು ಎನ್ನುವ ಮಾತನ್ನು ಸಿಎಂ ಹೇಳಿದರು. ಪುನೀತ್ ರಾಜ್ ಕುಮಾರ್ ಅವರ ಸಮಾಧಿ ಜಾಗದಲ್ಲಿ ಸ್ಮಾರಕ ನಿರ್ಮಾಣ ಮಾಡಲಾಗುತ್ತದೆ. ಇದರ ಜತೆಗೆ ಪುನೀತ್ ಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡುವ ಘೋಷಣೆ ಮಾಡುತ್ತಿದ್ದೇನೆ ಎಂದು ಹೇಳಿದರು.

Join Whatsapp