ಬೆಂಗಳೂರು: ವಯನಾಡು ಸಂತ್ರಸ್ತರಿಗೆ 100 ಮನೆಗಳನ್ನು ನಿರ್ಮಿಸಿಕೊಡುವುದಾಗಿ ಕರ್ನಾಟಕ ಸರ್ಕಾರ ಘೋಷಿಸಿದೆ.
ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ಕೇರಳ ಸರ್ಕಾರದೊಂದಿಗೆ ನಾವು ಇದ್ದೇವೆ. ಅಗತ್ಯ ನೆರವು ಒದಗಿಸುವುದರೊಂದಿಗೆ ಸಂತ್ರಸ್ತರಿಗಾಗಿ 100 ಮನೆಗಳನ್ನು ನಿರ್ಮಿಸಿಕೊಡುವ ಮೂಲಕ ನಾವು ಒಟ್ಟಾಗಿ ಅಲ್ಲಿನ ಜನರ ಬದುಕಿನಲ್ಲಿ ಮತ್ತೊಮ್ಮೆ ಭರವಸೆಯ ಆಶಾಕಿರಣವನ್ನು ಮೂಡಿಸೋಣ ಎಂದು ತಿಳಿಸಿದ್ದಾರೆ.
ಕೇರಳದ ವಯನಾಡಿನಲ್ಲಿ ಸಂಭವಿಸಿದ ಸರಣಿ ಭೂಕುಸಿತದಲ್ಲಿ 300ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. 270ಕ್ಕೂ ಅಧಿಕ ಜನರು ಗಾಯಗೊಂಡರೆ, 300ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ.
5ನೇ ದಿನವೂ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.