ಅತಿಹೆಚ್ಚು ಇವಿ ಚಾರ್ಜಿಂಗ್​ ಸ್ಟೇಷನ್: ಅಗ್ರ ಸ್ಥಾನದಲ್ಲಿ ಕರ್ನಾಟಕ

Prasthutha|

ಬೆಂಗಳೂರು: ಇಂಧನ ಇಲಾಖೆಯ ಅಧೀನದಲ್ಲಿ ಬರುವ ಬ್ಯೂರೋ ಆಫ್ ಎನರ್ಜಿ ಎಫಿಷಿಯೆನ್ಸಿ (BEE) ಯ ಇತ್ತೀಚಿನ ವರದಿಯ ಪ್ರಕಾರ, ಕರ್ನಾಟಕ ರಾಜ್ಯವು ದೇಶದಲ್ಲೇ ಅತಿ ಹೆಚ್ಚು ಸಾರ್ವಜನಿಕ ಎಲೆಕ್ಟ್ರಿಕ್ ವೆಹಿಕಲ್ ಚಾರ್ಜಿಂಗ್ ಸ್ಟೇಷನ್‌ಗಳನ್ನು (PEVCS) ಹೊಂದಿದೆ.

- Advertisement -

ಅವುಗಳಲ್ಲಿ ಹೆಚ್ಚಿನವು ಬೆಂಗಳೂರಿನಲ್ಲಿವೆ ಎಂದು ತಿಳಿಸಿವೆ.

ವರದಿಯ ಪ್ರಕಾರ, ರಾಜ್ಯದಲ್ಲಿ 5,765 ಎಲೆಕ್ಟ್ರಿಕ್ ವೆಹಿಕಲ್ ಚಾರ್ಜಿಂಗ್ ಸ್ಟೇಷನ್‌ಗಳಿದ್ದು, ಅದರಲ್ಲಿ 4,462 ಬೆಂಗಳೂರು ನಗರವೊಂದರಲ್ಲೇ ಇವೆ. 2023 ಮತ್ತು 2024 ರಲ್ಲಿ ವಾಹನ್ ಮತ್ತು ಯಾತ್ರಾ ಪೋರ್ಟಲ್‌ಗಳು ಬಿಡುಗಡೆ ಮಾಡಿರುವ ಇದೇ ರೀತಿಯ ವರದಿಗಳು, ಇವಿ ಚಾರ್ಜಿಂಗ್ ಸ್ಟೇಷನ್‌ಗಳಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ ಎಂಬುದನ್ನು ಬಹಿರಂಗಪಡಿಸಿವೆ.

- Advertisement -

ಶುದ್ಧ ಇಂಧನದ ಬಗ್ಗೆ ಕರ್ನಾಟಕಕ್ಕೆ ಇರುವ ಕಾಳಜಿ ಮತ್ತು ಬದ್ಧತೆಯನ್ನು ಇದು ತೋರಿಸಿದೆ ಎಂದು ಇಂಧನ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ. ಈ ಸಾಧನೆಯು ಸುಸ್ಥಿರತೆ ಮತ್ತು ಶುದ್ಧ ಇಂಧನಕ್ಕೆ ರಾಜ್ಯದ ಬದ್ಧತೆಯನ್ನು ಒತ್ತಿಹೇಳುತ್ತದೆ ಎಂದು ಇಂಧನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.



Join Whatsapp