ಮಾ.4ರಂದು ಬೆಂಗಳೂರಿನಲ್ಲಿ ಬೃಹತ್ ‘ಕರ್ನಾಟಕ ಉದ್ಯೋಗ ಮೇಳ’; 10,000ಕ್ಕೂ ಹೆಚ್ಚು ಉದ್ಯೋಗಾವಕಾಶ

Prasthutha|

ಬೆಂಗಳೂರು: ರಾಜ್ಯದ ಹಲವು ಸಂಘಟನೆಗಳ ಮುಂದಾಳತ್ವದಲ್ಲಿ ಮಾರ್ಚ್ 4ರ ಶನಿವಾರದಂದು ಬೆಂಗಳೂರಿನ ಲಾಲ್ಬಾಗ್ ಮುಖ್ಯ ಗೇಟ್ ಬಳಿಯ ಅಲ್ ಅಮೀನ್ ಆರ್ಟ್ಸ್, ಸೈನ್ಸ್ ಮತ್ತು ಕಾಮರ್ಸ್ ಕಾಲೇಜಿನಲ್ಲಿ ಬೃಹತ್ ಕರ್ನಾಟಕ ಉದ್ಯೋಗ ಮೇಳ ಆಯೋಜಿಸಲಾಗಿದೆ.

- Advertisement -


ಬೆಂಗಳೂರಿನ ಅಲ್ ಅಮೀನ್ ಕಾಲೇಜಿನಲ್ಲಿ ನಡೆಯಲಿರುವ ಬೃಹತ್ ಉದ್ಯೋಗ ಮೇಳದಲ್ಲಿ ಸುಮಾರು ಹತ್ತು ಸಾವಿರಕ್ಕೂ ಹೆಚ್ಚು ಉದ್ಯೋಗಾವಕಾಶಗಳು ದೊರೆಯಲಿದೆ ಎಂದು ಸಂಘಟಕರು ಮಾಹಿತಿ ನೀಡಿದ್ದಾರೆ.
ಸುಮಾರು ನೂರಕ್ಕೂ ಹೆಚ್ಚು ಪ್ರತಿಷ್ಠಿತ ಸಂಸ್ಥೆಗಳು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಲಿವೆ. ಅರ್ಹ ಆಸಕ್ತ ಅಭ್ಯರ್ಥಿಗಳು ಈ ಸದಾವಕಾಶವನ್ನು ಬಳಸಿಕೊಳ್ಳಲು ಸಂಘಟಕರು ಮನವಿ ಮಾಡಿದ್ದಾರೆ.
“ಕರ್ನಾಟಕ ಉದ್ಯೋಗ ಮೇಳ” ಎಂಬ ವಿಶಿಷ್ಟ ಮತ್ತು ಮಾದರಿ ಉದ್ಯೋಗ ಮೇಳವನ್ನು ಆಯೋಜಿಸಲು ನಾನಾ ಜನಪರ ಸಂಘಟನೆಗಳು ಒಗ್ಗೂಡಿ ರಾಜ್ಯದ ಯುವಜನರ ವೃತ್ತಿ ಅಭಿವೃದ್ಧಿ ಮತ್ತು ಉದ್ಯೋಗದ ನಿರೀಕ್ಷೆಗಳನ್ನು ಈ ಮೇಳವು ಬೆಂಬಲಿಸುತ್ತವೆ. ಈ ಮೇಳದಲ್ಲಿ ಉದ್ಯೋಗಾಕಾಂಕ್ಷಿಗಳಿಗೆ ಇಂದಿನ ಉದ್ಯೋಗ ಮಾರುಕಟ್ಟೆಯಲ್ಲಿ ಯಶಸ್ಸಿಗೆ ಅಗತ್ಯವಾದ ಕೌಶಲ್ಯಗಳನ್ನು ಕಲಿಯಲು ಮತ್ತು ಅಭಿವೃದ್ಧಿಪಡಿಸಲು ವೇದಿಕೆಯನ್ನು ಒದಗಿಸುತ್ತದೆ” ಎಂದು ಸಂಘಟಕರಲ್ಲೋರ್ವರಾದ ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ರಾಜ್ಯಾಧ್ಯಕ್ಷ ಲಬೀದ್ ಶಾಫಿ ತಿಳಿಸಿದ್ದಾರೆ.
ಉದ್ಯೋಗ ಮೇಳಕ್ಕೆ ಪ್ರವೇಶ ಉಚಿತವಾಗಿದ್ದು, ವಿವಿಧ ಸಂಸ್ಥೆಗಳು ಮೇಳದಲ್ಲಿ ಭಾಗವಹಿಸಲಿವೆ. ಪಾಲ್ಗೊಳ್ಳುವವರಿಗೆ ನೇಮಕಾತಿದಾರರನ್ನು ನೇರವಾಗಿ ಭೇಟಿ ಮಾಡಲು ಮತ್ತು ಸೆಮಿನಾರ್ಗಳಿಗೆ ಹಾಜರಾಗಲು ಮತ್ತು ವೆಬ್ ಸೈಟ್ನಲ್ಲಿ ಉದ್ಯೋಗ ಅರ್ಜಿಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.


ಅಸೋಸಿಯೇಷನ್ ಆಫ್ ಮುಸ್ಲಿಂ ಪ್ರೊಫೆಷನಲ್ಸ್, ಜಮಾತೆ ಇಸ್ಲಾಮಿ ಹಿಂದ್, ಕರ್ನಾಟಕ, ಮುಸ್ಲಿಂ ಕೈಗಾರಿಕೋದ್ಯಮಿಗಳ ಸಂಘ, ಅಲ್-ಅಮೀನ್ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್, ಶಾಹೀನ್ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್, ಇಸ್ಲಾಮಿಕ್ ಇನ್ಫಾರ್ಮೆಷನ್ ಸೆಂಟರ್, ಫಾಲ್ಕನ್ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್,ರಿಫಾ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿ, ಸಾಲಿಡಾರಿಟಿ ಯೂತ್ ಮೂವ್ಮೆಂಟ್, ಕರ್ನಾಟಕ ಹಾಗೂ ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಸೇಶನ್ ಆಫ್ ಇಂಡಿಯಾ(ಎಸ್ಐಓ) ಕರ್ನಾಟಕ ಸಂಘಟನೆಗಳ ನೇತೃತ್ವದಲ್ಲಿ ಈ ಮೇಳವನ್ನು ಆಯೋಜಿಸಲಾಗಿದೆ.

- Advertisement -


ಮೇಳದಲ್ಲಿ ಭಾಗವಹಿಸಲು ಆಸಕ್ತಿಯಿರುವ ಉದ್ಯೋಗಾಕಾಂಕ್ಷಿಗಳು ಕಡ್ಡಾಯವಾಗಿ ನೋಂದಣಿ ಮಾಡಬೇಕು. ನೋಂದಣಿ ಮಾಡಲು ಇರುವ ಲಿಂಕ್ http://ampindia.org/AMPJobForm ಹತ್ತನೇ ತರಗತಿ, ಪಿಯುಸಿ, ಪದವಿ ಮತ್ತು ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳು ಈ ಮೇಳದಲ್ಲಿ ಭಾಗವಹಿಸಬಹುದು. ಭಾಗವಹಿಸುವ ವೇಳೆ ಹತ್ತು ಪ್ರತಿ ‘ರೆಸ್ಯೂಮ್’ ತರಬೇಕು ಎಂದು ಸಂಘಟಕರು ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಈ ಮೊಬೈಲ್ ಸಂಖ್ಯೆಯನ್ನು ಸಂಪರ್ಕಿಸಿಬಹುದು. ಮೊಬೈಲ್ ಸಂಖ್ಯೆ + 91 8073 28 00 33

Join Whatsapp