Home ಟಾಪ್ ಸುದ್ದಿಗಳು ಗಣರಾಜ್ಯೋತ್ಸವ ಪರೇಡ್ ನಲ್ಲಿ ಕರ್ನಾಟಕದ ಸ್ತಬ್ಧ ಚಿತ್ರಕ್ಕೆ ಅನುಮತಿ ನಿರಾಕರಣೆ

ಗಣರಾಜ್ಯೋತ್ಸವ ಪರೇಡ್ ನಲ್ಲಿ ಕರ್ನಾಟಕದ ಸ್ತಬ್ಧ ಚಿತ್ರಕ್ಕೆ ಅನುಮತಿ ನಿರಾಕರಣೆ

ಬೆಂಗಳೂರು: ಜನವರಿ 26ರಂದು ದೆಹಲಿಯ ರಾಜಪಥ್ ನಲ್ಲಿ ನಡೆಯುವ ಗಣರಾಜ್ಯೋತ್ಸವ ದಿನಾಚರಣೆಯ ಪರೇಡ್ ನಲ್ಲಿ ಕರ್ನಾಟಕದ ಸ್ತಬ್ಧ ಚಿತ್ರಕ್ಕೆ ಅನುಮತಿ ನಿರಾಕರಿಸಲಾಗಿದೆ.


ತಮಿಳುನಾಡು, ಕೇರಳ ಸೇರಿ ಈ ಬಾರಿ ಒಟ್ಟು 13 ರಾಜ್ಯಗಳ ಸ್ತಬ್ಧಚಿತ್ರಗಳನ್ನು ಆಯ್ಕೆ ಮಾಡಲಾಗಿದೆ. ಅಂತಿಮ ಹಂತದಲ್ಲಿ ಕರ್ನಾಟಕ ಸ್ತಬ್ಧ ಚಿತ್ರಕ್ಕೆ ಅವಕಾಶ ನಿರಾಕರಣೆ ಮಾಡಲಾಗಿದೆ.


ಈ ಕುರಿತು ಮಾಹಿತಿ ನೀಡಿರುವ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತ ಹರ್ಷ, ಬೇರೆ ರಾಜ್ಯಗಳಿಗೆ ಅವಕಾಶ ನೀಡುವ ಕಾರಣದಿಂದ ಕರ್ನಾಟಕದ ಸ್ಥಬ್ದ ಚಿತ್ರಕ್ಕೆ ಅನುಮತಿ ನಿರಾಕರಣೆ ಮಾಡಲಾಗಿದೆ. ರಾಜ್ಯಗಳ ಆಯ್ಕೆಯ ಅಂತಿಮ ಹಂತದಲ್ಲಿ ಅನುಮತಿ ನಿರಾಕರಿಸಲಾಗಿದೆ. ಕರ್ನಾಟಕ ಕಳೆದ ಬಾರಿ ಎರಡನೇ ಸ್ಥಾನ ಪ್ರಶಸ್ತಿ ಪಡೆದಿತ್ತು. ಈ ಬಾರಿ ಮಹಿಳಾ ಸಬಲೀಕರಣದ ಥೀಮ್ ರೆಡಿ ಮಾಡಿದ್ದೆವು. ಆದ್ರೆ ಕೇಂದ್ರದಿಂದ ಅನುಮತಿ ಸಿಕ್ಕಿಲ್ಲ ಎಂದು ತಿಳಿಸಿದ್ದಾರೆ.


ಒಟ್ಟು ನಾಲ್ಕು ವಿಷಯಗಳನ್ನು ರಾಜ್ಯ ಕೊಟ್ಟಿತ್ತು. ಈ ಬಾರಿ ಸಾಲುಮರದ ತಿಮ್ಮಕ್ಕ, ಸೂಲಗಿತ್ತಿ ನರಸಮ್ಮ ಅವರ ಸ್ತಬ್ಧ ಚಿತ್ರ ಫೈನಲ್ ಆಗಿತ್ತು. ನಾರಿ ಶಕ್ತಿ ಸ್ತಬ್ಧಚಿತ್ರ ಕಲ್ಪನೆಗೆ ಮೆಚ್ಚುಗೆ ವ್ಯಕ್ತವಾಗಿತ್ತು. ಆದರೆ ಅಂತಿಮ ಹಂತದ ಸಭೆಯಲ್ಲಿ ಕರ್ನಾಟಕ ಸ್ತಬ್ಧಚಿತ್ರ ರಿಜೆಕ್ಟ್ ಆಗಿದೆ.

Join Whatsapp
Exit mobile version