ಕಾರವಾರ: ಕಾರಿಗೆ KSRTC ಬಸ್ ಡಿಕ್ಕಿ| ನಾಲ್ವರು ಮೃತ್ಯು

Prasthutha|

ಕಾರವಾರ: ಕಾರಿಗೆ KSRTC ಬಸ್ ಡಿಕ್ಕಿ ಹೊಡೆದು ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಇಂದು ಅಂಕೋಲಾ ತಾಲೂಕಿನ ಬಾಳೆಗುಳಿ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.  

- Advertisement -

ಅರುಣ್‌ ಪಾಂಡ್ಯನ್‌, ನಿಪುಲ್‌, ಮೊಹಮ್ಮದ್, ಶೇಖರನ್‌ ಮೃತ ದುರ್ದೈವಿಗಳಾಗಿದ್ದಾರೆ. ಮತ್ತೊಬ್ಬನ ಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ತಮಿಳುನಾಡು ಮೂಲದ ಇವರು ಗೋವಾದಲ್ಲಿ ಹೊಸವರ್ಷದ ಪಾರ್ಟಿ ಮುಗಿಸಿ ಗೋಕರ್ಣಕ್ಕೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ KSRTC ಬಸ್ ಡಿಕ್ಕಿ ಹೊಡೆದಿದ್ದು, ಕಾರಿನಲ್ಲಿದ್ದ ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

- Advertisement -

 ಸ್ಥಳಕ್ಕೆ ಅಂಕೋಲಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತ ದೇಹಗಳನ್ನು ಅಂಕೋಲಾ ತಾಲೂಕು ಆಸ್ಪತ್ರೆಗೆ ಸಾಗಿಸಲಾಗಿದೆ.